ಭಾರತಕ್ಕೆ ಭೇಟಿ ನೀಡಿದ ಪಾಕಿಸ್ತಾನದ ವಿದೇಶಾಂಗ ಸಚಿವ

31
Share

ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ-ಜರ್ದಾರಿ ಅವರು ಶಾಂಘೈ ಸಹಕಾರ ಸಂಘಟನೆಯ (SCO) ಸಮಾವೇಶದಲ್ಲಿ ಪಾಲ್ಗೊಳ್ಳಲು ಗುರುವಾರ ಗೋವಾಕ್ಕೆ ಆಗಮಿಸಿದರು. ಸುಮಾರು 12 ವರ್ಷಗಳ ನಂತರ ಭಾರತಕ್ಕೆ ಭೇಟಿ ನೀಡಿದ ನೆರೆಯ ದೇಶದ ಮೊದಲ ಹಿರಿಯ ನಾಯಕರಾಗಿದ್ದಾರೆ ಇವರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಇಸ್ಲಾಮಾಬಾದ್‌ನ ಗಡಿಯಾಚೆಗಿನ ಭಯೋತ್ಪಾದನೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಉಭಯ ದೇಶಗಳ ನಡುವಿನ ಸಂಬಂಧದಲ್ಲಿ ಮುಂದುವರಿದ ಒತ್ತಡದ ಮಧ್ಯೆ SCO ಕೌನ್ಸಿಲ್ ಆಫ್ ಫಾರಿನ್ ಮಿನಿಸ್ಟರ್ಸ್ (CFM) ಸಭೆಯಲ್ಲಿ ಪಾಲ್ಗೊಳ್ಳಲು ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ.
ಗೋವಾದ ವಿಮಾನ ನಿಲ್ದಾಣದಲ್ಲಿ ಪಾಕ್ ವಿದೇಶಾಂಗ ಸಚಿವರನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪಾಕಿಸ್ತಾನ-ಅಫ್ಘಾನಿಸ್ತಾನ-ಇರಾನ್ ವಿಭಾಗದ ಜಂಟಿ ಕಾರ್ಯದರ್ಶಿ ಜೆಪಿ ಸಿಂಗ್ ಸ್ವಾಗತಿಸಿದರು.
2011 ರಲ್ಲಿ, ಪಾಕಿಸ್ತಾನದ ಆಗಿನ ವಿದೇಶಾಂಗ ಸಚಿವ ಹೀನಾ ರಬ್ಬಾನಿ ಖಾರ್ ಅವರು ಭಾರತಕ್ಕೆ ಭೇಟಿ ನೀಡಿ ಅಂದಿನ ವಿದೇಶಾಂಗ ಸಚಿವ ಎಸ್‌ಎಂ ಕೃಷ್ಣ ಅವರೊಂದಿಗೆ ಮಾತುಕತೆ ನಡೆಸಿದ್ದರು.
“SCO ವಿದೇಶಾಂಗ ಮಂತ್ರಿಗಳ ಸಭೆಯಲ್ಲಿ ಪಾಕಿಸ್ತಾನಿ ನಿಯೋಗವನ್ನು ಮುನ್ನಡೆಸಲು ಗೋವಾ ತಲುಪಲು ನನಗೆ ತುಂಬಾ ಸಂತೋಷವಾಗಿದೆ. SCO CFM ಸಭೆ ಯಶಸ್ವಿಯಾಗುತ್ತದೆ ಎಂದು ನಿರೀಕ್ಷಿಸುತ್ತೇವೆ” ಎಂದು ಭುಟ್ಟೋ-ಜರ್ದಾರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

Share