ಭಾರತ ಸೇನೆಯಿಂದ ಉಗ್ರನೋರ್ವನ ಹತ್ಯೆ

27
Share

ಶುಕ್ರವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಭಯೋತ್ಪಾದಕನೊಬ್ಬನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಜೌರಿ ಸಮೀಪದ ದಸ್ಸಾಲ್ ಗುಜ್ರಾನ್ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ನಂತರ ಗುರುವಾರ ಮತ್ತು ಶುಕ್ರವಾರದ ಮಧ್ಯರಾತ್ರಿಯಲ್ಲಿ ಸೇನೆ ಮತ್ತು ಪೊಲೀಸರು ಜಂಟಿ ಸರ್ಚ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಯೋತ್ಪಾದಕರು ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿ ರಾತ್ರಿಯಿಡೀ ಗುಂಡಿನ ಚಕಮಕಿ ಮುಂದುವರೆಯಿತು ಎಂದು ಅವರು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಮುಖೇಶ್ ಸಿಂಗ್, ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದು ಸ್ಪಷ್ಟೀಕರಿಸಿದ್ದಾರೆ.

Share