ಮಂಡ್ಯ – ಮೇ 13 ರಂದು ನಿಷೇದಾಜ್ಞೆ

26
Share

 

ಮೇ 13 ರಂದು ನಿಷೇದಾಜ್ಞೆ

ಮಂಡ್ಯ. ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ 2023ರ ಮತದಾನ ಪ್ರಕ್ರಿಯೆ ಮುಗಿದಿದ್ದು, ಮೇ 13 ರಂದು ಮತ ಏಣಿಕೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಮೇ 13 ರಂದು ಬೆಳಿಗ್ಗೆ 6 ಗಂಟೆಯಿಂದ ಮೇ 14 ರ ಬೆಳಿಗ್ಗೆ 6 ಗಂಟೆವರೆಗೆ 144ರ ಅಡಿ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ಆದೇಶ ಹೊರಡಿಸಿದ್ದಾರೆ.

ಮತ ಏಣಿಕೆ ಕಾರ್ಯವು ಮುಗಿಯುತ್ತಿದ್ದಂತೆ ಅಭ್ಯರ್ಥಿಗಳು ಅವರು ಬೆಂಬಲಿಗರೊಡನೆ ಪಟಾಕಿ ಸಿಡಿಸಿಕೊಂಡು ಮೆರವಣಿಗೆಯ ಮೂಲಕ ವಿಜಯೋತ್ಸವವನ್ನು ಚುನಾವಣಾ ಮತ ಏಣಿಕೆ ಕಾರ್ಯ ನಡೆಯುತ್ತಿರುವ ಕೇಂದ್ರದ ಬಳಿ ಹಾಗೂ ಅವರವರ ಕ್ಷೆತ್ರ ವ್ಯಾಪ್ತಿಯ ಪಟ್ಟಣಗಳಲ್ಲಿ ಮತ್ತು ಗ್ರಾಮಗಳಿಗೆ ತೆರಳಿ ಅಲ್ಲಿಯೂ ಸಹಾ ಮೆರವಣಿಗೆ ಹಾಗೂ ವಿಜಯೋತ್ಸವವನ್ನು ಆಚರಿಸುವ ಸಂಭವಿರುತ್ತದೆ. ಈ ಸಮಯದಲ್ಲಿ ಪರಾಭವಗೊಂಡ ಅಭ್ಯರ್ಥಿಗಳ ಹಾಗೂ ಅವರ ಬೆಂಬಲಿಗರ ನಡುವೆ ಘರ್ಷಣೆ ಉಂಟಾಗಿ ಗ್ರಾಮಗಳಲ್ಲಿ ಹಲ್ಲೆಗಳು ನಡೆದು ಒನ್ನರು ಮತ್ತೊಬ್ಬರ ಮನೆಗಳಿಗೆ ಕಲ್ಲುಗಳನ್ನು ಹೊಡೆದು, ಬೆಂಕಿ ಹಚ್ಚಿ ದುಷ್ಕøತ್ಯಗಳನ್ನು ಮಾಡುವ ಸಾಧ್ಯತೆ ಇದ್ದು ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವು ಸಾಧ್ಯತೆಗಳು ಇರುತ್ತದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮೇ 13 ರ ಬೆಳಿಗ್ಗೆ 6 ಗಂಟೆಯಿಂದ ಮೇ 14 ರ ಬೆಳಿಗ್ಗೆ 6 ಗಂಟೆಯವರೆಗೆ ಯಾವುದೇ ಮೆರವಣಿಗೆ ಮಾಡುವುದನ್ನು, ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ತಡೆಗಟ್ಟಲು ಸಿ.ಆರ್.ಪಿ.ಸಿ ಕಲಂ 144ರ ಅನ್ವಯ ಮಂಡ್ಯಜಿಲ್ಲೆಯಾದ್ಯಂತ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿರುತ್ತೇನೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share