ಮಧು ಬಂಗಾರಪ್ಪ ಕಾಂಗ್ರೆಸ್ ಗೆ ಸೇರ್ಪಡೆ

235
Share

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ವೀಕ್ಷಕ ಮಧು ಯಾಕ್ಷಿಗೌಡ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ಮಾಜಿ ಸಚಿವ ಎಚ್.ಕೆ. ಪಾಟೀಲ್ ಸಮ್ಮುಖದಲ್ಲಿ, ಮಾಜಿ ಶಾಸಕ ಮಧು ಬಂಗಾರಪ್ಪ ಅವರು ತಮ್ಮ ಅಪಾರ ಬೆಂಬಲಿಗರ ಜತೆ ಜೆಡಿಎಸ್ ತೊರೆದು ಹುಬ್ಬಳ್ಳಿಯಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಮಾಜಿ ಶಾಸಕರಾದ ಪ್ರಸನ್ನಕುಮಾರ್, ಬೇಳೂರು ಗೋಪಾಲಕೃಷ್ಣ, ಎಂಎಲ್ಸಿ ಪ್ರಸನ್ನಕುಮಾರ್, ಶಿವಮೊಗ್ಗ ಡಿಸಿಸಿ ಅಧ್ಯಕ್ಷ ಸುಂದರೇಶ್, ಮಂಜುನಾಥಗೌಡ, ಸೇರಿದಂತೆ ಶಿವಮೊಗ್ಗದ ಅನೇಕ ಮುಖಂಡರು ಹಾಜರಿದ್ದರು.

ಹುಬ್ಬಳ್ಳಿಯಲ್ಲಿ, ಶುಕ್ರವಾರ ನಡೆದ ಬೆಳಗಾವಿ ವಿಭಾಗೀಯ ಮಟ್ಟದ ನಾನಾ ಜಿಲ್ಲೆಗಳ ಕಾಂಗ್ರೆಸ್ ಮುಖಂಡರ ಜತೆಗಿನ ಪಕ್ಷ ಸಂಘಟನೆ, ಬಲವರ್ಧನೆ ಕುರಿತ ಸಮಾಲೋಚನೆ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಎಐಸಿಸಿ ವೀಕ್ಷಕ ಮಧು ಯಾಕ್ಷಿಗೌಡ, ಮಾಜಿ ಸಚಿವರಾದ ಎಚ್.ಕೆ. ಪಾಟೀಲ್, ಆರ್.ವಿ. ದೇಶಪಾಂಡೆ, ಎಂ.ಬಿ. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಸತೀಶ್ ಜಾರಕಿಹೊಳಿ ಮತ್ತಿತರರು ಭಾಗವಹಿಸಿದ್ದರು.


Share