ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಪ್ರಮಾಣ ವಚನ ಸ್ವೀಕಾರ

38
Share

ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಮಾಜಿ ಶಿಕ್ಷಣ ಸಚಿವ ಮತ್ತು ಮಧ್ಯಪ್ರದೇಶದ ಉಜ್ಜಯಿನಿ ದಕ್ಷಿಣದಿಂದ ಮೂರು ಬಾರಿ ಶಾಸಕರಾಗಿರುವ ಮೋಹನ್ ಯಾದವ್ ಅವರು ಭೋಪಾಲ್‌ನ ಲಾಲ್ ಪರೇಡ್ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರೊಂದಿಗೆ ರಾಜೇಂದ್ರ ಶುಕ್ಲಾ ಮತ್ತು ಜಗದೀಶ್ ದೇವದಾ ಅವರ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಉಪಸ್ಥಿತರಿದ್ದರು.

Share