ಮಹಿಳೆಯರ ಸಬಲೀಕರಣಕ್ಕೆ ಬಿಜೆಪಿ ಒತ್ತು

124
Share

 

ಮಹಿಳೆಯರ ಸಬಲೀಕರಣಕ್ಕೆ ಬಿಜೆಪಿ ಒತ್ತು
ನಾರಿ ಶಕ್ತಿ ಕಾರ್ಯಕ್ರಮದಲ್ಲಿ: ರೇಣುಕ ರಾಜ್

‘ದೇಶದ ಅಖಂಡತೆ ಮತ್ತು ಅಭಿವೃದ್ಧಿಗೆ ಬಿಜೆಪಿ ಒತ್ತು ನೀಡುತ್ತದೆ. ಕಾಂಗ್ರೆಸ್‌ ಪಕ್ಷದಂತೆ ಪುಕ್ಕಟ್ಟೆ ಭಾಗ್ಯಗಳನ್ನು ನೀಡಿ, ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡುವುದಕ್ಕೆ ಹೋಗುವುದಿಲ್ಲ’ ಎಂದು ಬಿಜೆಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕ ರಾಜ್ ಹೇಳಿದರು.

ನಗರದ ಕುವೆಂಪು ನಗರದಲ್ಲಿರುವ ಮೈಸೂರು ನಗರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಬಂದಂತಮ್ಮ ಮತ್ತು ಶ್ರೀ ಕಾಳಮ್ಮ ದೇವಸ್ಥಾನದಲ್ಲಿ ನಾರಿ ಶಕ್ತಿ ಎಂಬ ಕಾರ್ಯಕ್ರಮದಲ್ಲಿ ಶಕ್ತಿ ದೇವಿ ಪೂಜೆ ಮಾಡಿ ನಾವು ಶಕ್ತಿ ಆರಾಧಕರು, ಮತ್ತೊಮ್ಮೆ ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ, ಹಲವಾರು ಘೋಷಣೆ ಕೂಗಿದರು
ಅವರು ಬಳಿ ಕ
ಮಾತನಾಡುತ್ತಾ.ಬಿಜೆಪಿಯು ಮಹಿಳೆಯರ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿದೆ. ಚುನಾವಣೆಯಲ್ಲಿ ಸಾಮಾನ್ಯ ಮಹಿಳೆಯರಿಗೂ ಸ್ಪರ್ಧಿಸುವ ಅವಕಾಶ ಕಲ್ಪಿಸಿದೆ. .

‘ಲೋಕಸಭಾ ಚುನಾವಾಣೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಮೈಸೂರು ಕೊಡಗುಲೋಕಸಭಾ ಕ್ಷೇತ್ರಕ್ಕೆ ನಮ್ಮ ಯುವರಾಜರಾದ ಯದುವೀರ್ ಶ್ರೀ ಕೃಷ್ಣ ದತ್ತ ಒಡೆಯರು ಅವರಿಗೆ ಸ್ಪರ್ಧಿಸಲು ಅವಕಾಶ ದೊರತಿದ್ದು, ನಮೆಗಲ್ಲ ಸಂತಸವಾಗಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 2 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲ್ಲುವಂತೆ ನಾವೆಲ್ಲರೂ ಶ್ರಮಿಸಬೇಕಿದೆ ಎಂದು ಹೇಳಿದರು.

ನರೇಂದ್ರ ಮೋದಿ ಅವರು ಮುದ್ರಾಯೋಜನೆ, ಜನಧನ ಯೋಜನೆ, ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ, ಸ್ವಚ್ಛ ಭಾರತ, ಉಜ್ವಲ ಯೋಜನೆ ಇನ್ನೂ ಹಲವಾರು ಯೋಜನೆಗಳ ಮೂಲಕ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಿದ್ದಾರೆ ಹಾಗೂ ಲೋಕಸಭೆ, ವಿಧಾನಸಭೆಗಳಲ್ಲಿ ಶೇ33ರಷ್ಟು ಮೀಸಲಾತಿ ನೀಡಿ, ಕಾನೂನು ರೂಪಿಸುವಲ್ಲಿ ಮಹಿಳೆಯರಿಗೆ ಅವಕಾಶ ಕಲ್ಪಿಸಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ
ಮಾಜಿ ಉಪ ಮಹಾಪುರಾದ ಡಾಕ್ಟರ್ ರೂಪ , ಮಾಜಿನಗರ ಪಾಲಿಕೆ ಸದಸ್ಯರಾದ ಲಕ್ಷ್ಮಿ ಕಿರಣ್ ಗೌಡ,
ನಗರ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಕಲಾ, ಮಮತಾ ಶೆಟ್ಟಿ,
ಕ್ಷೇತ್ರದ ಅಧ್ಯಕ್ಷರುಗಳಾದ ಚಾಮುಂಡೇಶ್ವರಿ ನಗರ ಮಂಡಲ ಅಧ್ಯಕ್ಷರಾದ ಲಕ್ಷ್ಮಿ, ಕೃಷ್ಣರಾಜ ಕ್ಷೇತ್ರದ ಅಧ್ಯಕ್ಷರಾದ ಸರ್ವ ಮಂಗಳ, ಚಾಮುಂಡೇಶ್ವರಿ ಗ್ರಾಮಾಂತರ ಮಮತಾ ಗೌಡ, ನರಸಿಂಹರಾಜ ಕ್ಷೇತ್ರದ ಮಾಲಿನಿ ಪಾಲಾಕ್ಷ, ಹಾಗೂ ನೂರಾರು ಬಿಜೆಪಿ ಮಹಿಳಾ ಕಾರ್ಯಕರ್ತರು ಹಾಜರಿದ್ದರು


Share