ಮೈಸೂರು,ಇಂದಿನ (12-2-201)ಕಾರ್ಯಕ್ರಮ

322
Share

: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್‍ನ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮವನ್ನು ದಿನಾಂಕ:12-2-2021ರ ಶುಕ್ರವಾರದಂದು ಬೆಳಿಗ್ಗೆ 10 ಗಂಟೆಗೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮಾಧ್ಯಮ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಕೋರಿದೆ.
: ಫೆ.12ರಂದು ಕೈಗಾರಿಕೆಗಳು ಮತ್ತು ತಾಂತ್ರಿಕ ಸಂಸ್ಥೆಗಳ ಕಾರ್ಯಾಗಾರ
ಮೈಸೂರು ):- ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ, ಸಿಮೆನ್ಸ್ ಇಂಡಸ್ಟ್ರೀ ಸಾಫ್ಟ್‍ವೇರ್ ಪ್ರೈವೆಟ್ ಲಿಮಿಟೆಡ್ ಹಾಗೂ ಡಿಸೈನ್‍ಟೆಕ್ ಸಿಸ್ಟಮ್ ಸಹಯೋಗದ ವತಿಯಿಂದ ಕೈಗಾರಿಕೆಗಳು ಮತ್ತು ತಾಂತ್ರಿಕ ಸಂಸ್ಥೆಗಳ ಕಾರ್ಯಾಗಾರವನ್ನು 2021ರ ಫೆಬ್ರವರಿ 12ರಂದು ಬೆಳಿಗ್ಗೆ 9 ಗಂಟೆಗೆ ವಿ.ವಿ.ಮೊಹಲ್ಲಾ ನಗರದಲ್ಲಿರುವ ರೂಪಾ ಎಲೈಟ್ ಹೋಟೆಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9141629567 ಮತ್ತು 9141630315 ಅನ್ನು ಸಂಪರ್ಕಿಸಬಹುದು ಎಂದು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಉಪ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
: ಸ್ಥಳ: ಮೈಸೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವು ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆಯೋಜಿಸಿದ್ದ 60 ದಿನಗಳ ಆನ್ ಲೈನ್ ತರಬೇತಿ ಶಿಬಿರವನ್ನು ನಾಡಿನ ಹಿರಿಯ ಐಎಎಸ್ ಅಧಿಕಾರಿ ಡಾ. ಶಾಲಿನಿ ರಜನೀಶ್ ಅವರು ಫೆಬ್ರವರಿ 12 ರ ಶುಕ್ರವಾರ ಬೆಳಿಗ್ಗೆ 11ಕ್ಕೆ ಬೆಂಗಳೂರಿನಿಂದಲೇ ಆನ್ ಲೈನ್ ನಲ್ಲಿ ತರಬೇತಿ ಶಿಬಿರಾರ್ಥಿಗಳಿಗೆ ಶುಭಹಾರೈಸಿ ಮುಖ್ಯ ಭಾಷಣ ಮಾಡುವರು.

ಹಾಸನ ಮೂಲದ ನಾಗಲ್ಯಾಂಡ್ ಕೇಡರ್ ಹಿರಿಯ ಐಪಿಎಸ್ ಅಧಿಕಾರಿ ಡಿಐಜಿ ಎನ್. ರಾಜಶೇಖರ ಮತ್ತು ಐಎಎಸ್ ಅಧಿಕಾರಿ ಹಾಸನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ. ಭಾರತಿ ಅವರು ಅತಿಥಿಗಳಾಗಿ ಆನ್ ಲೈನ್ ನಲ್ಲಿ ಭಾಗವಹಿಸುವರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಅಧ್ಯಕ್ಷತೆ ವಹಿಸಲಿದ್ದು, ಕುಲಸಚಿವ ಪ್ರೊ.ಲಿಂಗರಾಜಗಾಂಧಿ ಉಪಸ್ಥಿತರಿರುವರು

ಮಾನ್ಯ ಕುಲಪತಿಗಳ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐಎಎಸ್ ಕೆಎಎಸ್ 60 ದಿನಗಳ ಆನ್ ಲೈನ್ ತರಬೇತಿ ಶಿಬಿರವು ನವೆಂಬರ್ 27ರಂದು ಪ್ರಾರಂಭವಾಗಿದ್ದು ಈ ಶಿಬಿರದಲ್ಲಿ ನಿಷ್ಣಾತರಾದ ಐಎಎಸ್ ಕೆಎಎಸ್ ಅಧಿಕಾರಿಗಳು, ಪ್ರಾಧ್ಯಾಪಕರುಗಳು ವಿವಿಧ ಕ್ಷೇತ್ರಗಳ ವಿಷಯ ತಜ್ಞರುಗಳು ತರಬೇತಿ ನೀಡಿರುತ್ತಾರೆ. 1300ಕ್ಕೂ ಹೆಚ್ಚು ಸ್ಪರ್ಧಾರ್ಥಿಗಳು ಭಾಗವಹಿಸುತ್ತಿದ್ದಾರೆ ಎಂದು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ತಿಳಿಸಿದ್ದಾರೆ.


Share