ಮೈಸೂರು-ಇ-KYC ಕಡ್ಡಾಯವಾಗಿ ಮಾಡಿಸಬೇಕು: ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್

733
Share

ಇ-KYC ಅನ್ನು ಕಡ್ಡಾಯವಾಗಿ ಮಾಡಿಸಬೇಕು: ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್

ಮೈಸೂರು,  ಮೈಸೂರು ಜಿಲ್ಲೆಯಲ್ಲಿ ರೇಷನ್ ಕಾರ್ಡ್ ಹೊಂದಿದ ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರು ಅಗತ್ಯ ದಾಖಲೆಗಳೊಂದಿಗೆ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಇ-KYC (ಆಧಾರ್ ಆಧಾರಿತ ಹೆಬ್ಬೆಟ್ಟಿನ ದೃಢೀಕರಣ)ವನ್ನು ಕಡ್ಡಾಯವಾಗಿ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಧಾರ್ ದೃಢೀಕರಣ (ಇ-KYC ವನ್ನು ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 10ರವರೆಗೆ ಉಚಿತವಾಗಿ ಮಾಡಿಕೊಡಲಾಗುತ್ತದೆ. ಇ-ಕೆವೈಸಿ ಮಾಡಿಸಲು ಎಸ್.ಸಿ ಮತ್ತು ಎಸ್.ಟಿ ಜಾತಿಯವರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ, ಗ್ಯಾಸ್ ಕನೆಕ್ಷನ್ ಪುಸ್ತಕ, ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಯ ದಾಖಲೆಗಳನ್ನು ಲಗತ್ತಿಸಬೇಕು. ಚಿತ್ರಕೃಪೆ ಏಷ್ಯಾನೆಟ್


Share