ಮೈಸೂರು- ಗ್ಯಾಸ್ ಸಿಲೆಂಡರ್ ಸ್ಫೋಟ 4, ಮಂದಿ ಸ್ಥಿತಿ ಗಂಭೀರ

311
Share

 

ಮೈಸೂರಿನಲ್ಲಿ ಸಿಲಿಂಡರ್ ಸ್ಪೋಟ- ಅಕ್ಕಪಕ್ಕದ ಮನೆಗಳಿಗೆ ಹಾನಿ- ಹತ್ತಕ್ಕೂ ಹೆಚ್ಚು ಜನರಿಗೆ ಗಾಯ- ನಾಲ್ವರ ಸ್ಥಿತಿ ಗಂಭೀರ

ಮೈಸೂರು- ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬೆಳ್ಳಂಬೆಳಿಗ್ಗೆ ಸಿಲಿಂಡರ್ ಸ್ಪೋಟವಾಗಿದೆ. ಮೈಸೂರಿನ ಬನ್ನಿಮಂಟಪ‌ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಬನ್ನಿಮಂಟಪದ ಅಗ್ನಿಶಾಮಕ ದಳದ ಸಿಬ್ಬಂದಿಗಳ ವಸತಿ ಗೃಹದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಈ ಘಟನೆಯಲ್ಲಿ ಹತ್ತುಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ನಾಲ್ವರ ಸ್ಥಿತಿ‌ ಗಂಭೀರವಾಗಿದೆ. ಮೈಸೂರಿನ ಸೈಂಟ್ ಜೋಸೆಫ್ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ದಾಖಲಾತಿ ಮಾಡಲಾಗಿದೆ. ಸ್ಪೋಟದ ತೀವ್ರತೆಗೆ ಅಕ್ಕಪಕ್ಕದ ಮನೆಗಳಿಗು ಹಾನಿಯಾಗಿದೆ.


Share