ಮೈಸೂರು ಜಿಲ್ಲೆ 2023ರೊಳಗೆ ಅಪೌಷ್ಟಿಕತೆಯಿಂದ ಮುಕ್ತವಾಗಬೇಕು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

307
Share

 

ಮೈಸೂರು ಜಿಲ್ಲೆ 2023ರೊಳಗೆ ಅಪೌಷ್ಟಿಕತೆಯಿಂದ ಮುಕ್ತವಾಗಬೇಕು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ಮೈಸೂರು):- ಮೈಸೂರು ಜಿಲ್ಲೆಯು 2023ರೊಳಗೆ ಅಪೌಷ್ಟಿಕತೆಯಿಂದ ಮುಕ್ತವಾಗಬೇಕು. ಪ್ರತಿಯೊಬ್ಬ ಹೆಣ್ಣುಮಗಳು ಗರ್ಭಿಣಿಯಾದ ಸಂದರ್ಭದಲ್ಲಿ ಅವರಿಗೆ ಸರಿಯಾದ ಆಹಾರ ಪದ್ಧ್ದತಿಯ ಬಗ್ಗೆ ಅರಿವು ಮೂಡಿಸಿದರೆ ರಕ್ತಹೀನತೆ ಬರುವುದಿಲ್ಲ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ ಹಾಗೂ ಮಾತೃಶ್ರೀ ವಿದ್ಯಾ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಬುಧವಾರ ಜಿಲ್ಲಾ ಪಂಚಾಯತಿಯಲ್ಲಿ ನಡೆದ ಪೋಷಣ್ ಪಖ್ವಾಡ್ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮೈಸೂರು ಜಿಲ್ಲೆಯಲ್ಲಿ ತೀವ್ರ ಅಪೌಷ್ಟಿಕತೆ ಇರುವ ಮಕ್ಕಳಲ್ಲಿ 135 ಮಕ್ಕಳಲ್ಲಿದ್ದು, ಶೇ 12% ರಷ್ಟು ಅಪೌಷ್ಟಿಕತೆಯಿಂದ ಕೂಡಿರುವ ಮಕ್ಕಳಿದ್ದಾರೆ. ಅಲ್ಲದೆ ಜಿಲ್ಲೆಯಲ್ಲಿ ಅನಿಮಿಯಾ (ರಕ್ತಹೀನತೆ)ವು ಹೆಚ್ಚಾಗುತ್ತಿದ್ದು, ಹೆಣ್ಣು ಮಕ್ಕಳೇ ಹೆಚ್ಚಾಗಿ ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಹೇಳಿದರು.
ಕರ್ನಾಟಕದಲ್ಲಿ ಪ್ರಾಚೀನ ಪದ್ಧತಿಯ ಪೌಷ್ಟಿಕವಾದ ಆಹಾರವನ್ನೇ ಸೇವಿಸಲಾಗುತ್ತಿತ್ತು. ಇಂದಿನ ಕಾಲದಲ್ಲಿಯೂ ಅದೇ ಆಹಾರ ಪದ್ಧತಿಯನ್ನು ರೂಢಿಸಿಕೊಂಡರೆ ಅಪೌಷ್ಟಿಕತೆ ಸಮಸ್ಯೆಯಿಂದ ದೂರವಿರಬಹುದು ಎಂದರು.
ಡಾ.ಟಿ.ಅಮರ್‌ನಾಥ್ ಅವರು ಮಾತನಾಡಿ, ಜನವರಿ ಹಾಗೂ ಫೆಬ್ರವರಿ ಮಾಹೆಯಲ್ಲಿ ಕೊರೊನಾವನ್ನು ನಿಯಂತ್ರಣಕ್ಕೆ ತರಲಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚೆತ್ತುಕೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದರು.
ಕೊರೊನಾ ಪ್ರಕರಣಗಳು ಹೆಚ್ಚಾತ್ತಿರುವ ಹಿನ್ನೆಲೆ ಕೊರೋನ ಲಸಿಯನ್ನು ಉಚಿತವಾಗಿ ವಿತರಿಸಲಾಗುತ್ತಿದ್ದು, ಎಪ್ರೀಲ್ 1ರಿಂದ 45ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ. ಸ್ಥಳೀಯ ಸಾರ್ವಜನಿಕರು ಲಸಿಕೆ ಪಡೆದುಕೊಳ್ಳುವಂತೆ ಕರೆ ನೀಡಿದರು.
ಮೈಸೂರು ಜಿಲ್ಲೆಯಲ್ಲಿ 8ಲಕ್ಷ ಜನರಿಗೆ ಲಸಿಕೆ ನೀಡಬೇಕಾಗಿದ್ದು, ಪ್ರಸ್ತುತ 1,80ಸಾವಿರ ಜನರನ್ನು ಮಾತ್ರ ಗುರುತಿಸಲಾಗಿದೆ. ಇದರಿಂದ ಯಾವುದೇ ವ್ಯಕ್ತಿಯಲ್ಲಿ ರೋಗದ ಲಕ್ಷಣಗಳು ಕಂಡುಬAದರೆ ಸ್ವಾಪ್ ಟೆಸ್ಟ್ ಮಾಡಿಸಲು ಹೇಳಿ ಎಂದು ಅಂಗನವಾಡಿ ಕಾರ್ಯಕರ್ತರಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ಅಧ್ಯಕ್ಷರಾದ ಬಿ.ಸಿ.ಪರಿಮಳ ಶ್ಯಾಂ, ಉಪಾಧ್ಯಕ್ಷೆ ಗೌರಮ್ಮ ಸೋಮಶೇಖರ್, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎ.ಎಂ.ಯೋಗೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಕೆ.ಪದ್ಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಟಿ.ಅಮರ್ ನಾಥ್, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಸದಸ್ಯ ಮಂಜುನಾಥನ್ ಸೇರಿದಂತೆ ಇತರರು ಹಾಜರಿದ್ದರು.

Share