ಮೈಸೂರು-ಮದ್ಯ ಮಾರಾಟ ನಿಷೇಧ

100
Share

ಮದ್ಯ ಮಾರಾಟ ನಿಷೇಧ*

 ಮೈಸೂರು,ಮಾ.21:- ಲೋಕಸಭಾ ಸಾರ್ವತ್ರಿಕ ಚುನಾವಣೆ -2024ರ ಸಂಬoಧ ಚುನಾವಣೆಯು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಠಿಯಿಂದ ಮತದಾನದ ಅಂಗವಾಗಿ ಏ.24 ರಂದು ಸಂಜೆ 5 ಗಂಟೆಯಿoದ ಏ. 26 ರ ಮಧ್ಯರಾತ್ರಿ 12 ಗಂಟೆಯವರೆಗೆ ಮತ್ತು ಮೈಸೂರು ನಗರದ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಮತ ಎಣಿಕೆ ಅಂಗವಾಗಿ ಜೂನ್.03 ರಂದು ಮಧ್ಯರಾತ್ರಿ 12 ಗಂಟೆಯಿoದ ಜೂನ್.4 ರ ಮಧ್ಯರಾತ್ರಿ 12 ಗಂಟೆಯವರೆಗೆ ಮೈಸೂರು ನಗರ ವ್ಯಾಪ್ತಿ ಹಾಗೂ ನಗರ ವ್ಯಾಪ್ತಿಯಿಂದ 05 ಕಿ.ಮೀ ವ್ಯಾಪ್ತಿಯಲ್ಲಿನ ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮುಚ್ಚಲು ಮತ್ತು ಮದ್ಯ ಮಾರಾಟ, ಸಾಗಾಣಿಕೆ, ಶೇಖರಣೆಯನ್ನು ನಿಷೇಧಿಸಿ ಒಣ ದಿವಸ(ಡ್ರೈ ಡೇಸ್) ಗಳೆಂದು ಘೋಷಿಸಲಾಗಿದೆ.

 ಎಲ್ಲಾ ಮದ್ಯದ ಅಂಗಡಿಗಳನ್ನು ಹಾಗೂ ಮದ್ಯ ತಯಾರಿಕಾ ಘಟಕಗಳನ್ನು ಮುಚ್ಚಿಸಿ ಮೊಹರು ಮಾಡಿ ಅದರ ಕೀ ಯನ್ನು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟರಿಗೆ ಒಪ್ಪಿಸಬೇಕಾಗಿ ಮೈಸೂರು ನಗರ ಮತ್ತು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಿಗೆ ನಿರ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ದಂಡಾಧಿಕಾರಿಯಾದ ಡಾ.ರಾಜೇಂದ್ರ ಕೆ.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 


Share