ಮೈಸೂರು- ಮುಖ್ಯಮಂತ್ರಿ ಇಂದು ಜಿಲ್ಲಾ ಪ್ರವಾಸ

24
Share

ಮುಖ್ಯಮಂತ್ರಿ ಇಂದಿನ‌ ಮೈಸೂರು ಜಿಲ್ಲಾ ಪ್ರವಾಸ ಕಾರ್ಯಕ್ರಮ 

ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಜೂನ್ 10 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಮಧ್ಯಾಹ್ನ  12.20 ಕ್ಕೆ ಸುತ್ತೂರಿನ ಜೆಎಸ್ಎಸ್ ವಸತಿ ಶಾಲಾ ಮೈದಾನದ ಹೆಲಿಪ್ಯಾಡ್ ತಲುಪುವರು. 12:35ಕ್ಕೆ ಬಿಳಿಗೆರೆ ಗ್ರಾಮದಲ್ಲಿ ಹಮ್ಮಿಕೊಂಡಿರುವ ಕೃತಜ್ಞತಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2:45 ಕ್ಕೆ ಸುತ್ತೂರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು ಸಂಜೆ 4 ಗಂಟೆಗೆ ಮೈಸೂರಿನ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸುವರು.
ಜೂನ್ 11ರಂದು ಬೆಳಗ್ಗೆ 9:30ಕ್ಕೆ ಮೈಸೂರು ವಿಮಾನ ನಿಲ್ದಾಣದಿಂದ ಹೊರಡುವರು ಎಂದು ಪ್ರಕಟಣೆ ತಿಳಿಸಿದೆ.
ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜೂನ್ 10 ರಂದು ಬೆಳಗ್ಗೆ 12.20 ಗಂಟೆಗೆ ಜೆಎಸ್ ಎಸ್ ವಸತಿ ಶಾಲಾ ಮೈದಾನದ ಹೆಲಿಪ್ಯಾಡ್ ಗೆ ಆಗಮಿಸುವರು.

 

 


Share