ಮೈಸೂರು, ಯೋಗ ದರ್ಶನ ಮತ್ತು ಯೋಗಥಾನ್” ಕಾರ್ಯಕ್ರಮ

25
Share

 

ಜೂನ್ 17 ರಂದು ಯೋಗ ದಿನಾಚರಣೆ

ಮೈಸೂರು,- ಕರ್ನಾಟಕ ಸರ್ಕಾರ ಆಯುಷ್ ಇಲಾಖೆ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಮೈಸೂರು ಇವರ ಸಹಯೋಗದೊಂದಿಗೆ ಜೂನ್ 17ನೇ ಶನಿವಾರದಂದು ಬೆಳಗ್ಗೆ 6 ರಿಂದ 8 ಗಂಟೆಯವರೆಗೆ 9 ನೇ ಅಂತರಾಷ್ಟಿಯ ಯೋಗ ದಿನಾಚರಣೆ ಅಂಗವಾಗಿ ಮೈಸೂರಿನ ಅರಮನೆ ಕೋಟೆ ಅಂಜನೇಯಸ್ವಾಮಿ ದೇವಸ್ಥಾನದ ಅವರಣದಲ್ಲಿ “ಯೋಗ ದರ್ಶನ ಮತ್ತು ಯೋಗಥಾನ್” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ಸರ್ಕಾರದ ಸನ್ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಅವರ ಘನ ಉಪಸ್ಥಿತಿಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪನವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೃಷ್ಣರಾಜ ಕ್ಷೇತ್ರದ ವಿಧಾನ ಸಭಾ ಶಾಸಕರಾದ ಟಿ ಎಸ್ ಶ್ರೀವತ್ಸರವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆಯ ಸಚಿವರಾದ ಕೆ ವೆಂಕಟೇಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡುರಾವ್ ಉಪಸ್ಥಿತಿಯಲ್ಲಿರುವರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಹಾಪೌರರಾದ ಶಿವಕುಮಾರ್, ಲೋಕಸಭಾ ಸದಸ್ಯರದಾರ ಪ್ರತಾಪ್ ಸಿಂಹ, ಸುಮಲತಾ ಅಂಬರೀಷ್, ಮತ್ತು ವಿಧಾನ ಸಭಾ ಶಾಸಕರಾದ ತನ್ವೀರ್ ಸೇಠ್, ಜಿ.ಟಿ. ದೇವೇಗೌಡ, ಅನಿಲ್ ಕುಮಾರ್ ಸಿ, ರವಿಶಂಕರ್.ಡಿ, ದರ್ಶನ್ ಧೃವನಾರಾಯಣ್, ಕೆ ಹರೀಶ್ ಗೌಡ, ಜಿ.ಡಿ ಹರೀಶ್ ಗೌಡ, ವಿಧಾನ ಪರಿಷತ್ ಶಾಸಕರಾದ ಎಚ್. ವಿಶ್ವನಾಥ್, ಮರಿತಿಬ್ಬೇಗೌಡ, ಡಿ ತಿಮ್ಮಯ್ಯ, ಮಧು ಜಿ ಮಾದೇಗೌಡ, ಸಿ ಎನ್ ಮಂಜೇಗೌಡ ಹಾಗೂ ಉಪ ಮಹಾಪೌರರಾದ ಡಾ. ಜಿ ರೂಪ, ಕಾರ್ಪೋರೇಟರ್ ಸತೀಶ್, ಎಸ್.ಬಿ.ಎಂ ಮಂಜುರವರು ಭಾಗವಹಿಸಲಿದ್ದಾರೆ ಎಂದು ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಪ್ರಾಚಾರ್ಯರಾದ ಡಾ ಗಜಾನನ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share