ಮೈಸೂರು ವಿದ್ಯಾರ್ಥಿನಿ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ

332
Share

ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ

ಇತ್ತೀಚೆಗೆ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ “ಮೈಸೂರು ಟ್ರಾಕ್ ಅಂಡ್ ಫೀಲ್ಡ್ ಮೀಟ್ -೨೦೨೨” ಅಥ್ಲೆಟಿಕ್ ಸ್ಪರ್ಧೆಯಲ್ಲಿ ಮೈಸೂರಿನ ಪೊಲೀಸ್ ಪಬ್ಲಿಕ್ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಲೇಖನ ಪ್ರಸಾದ್ ಅವರು ೮೦ ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಹಾಗೂ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಎರಡನೇ ಸ್ಥಾನ ಗಳಿಸಿ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದಾರೆ.
ಮಾತ್ರವಲ್ಲ, ಸದ್ಯದಲ್ಲೇ ಬಿಹಾರ ರಾಜ್ಯದಲ್ಲಿ ನಡೆಯಲಿರುವ ರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆ ಆಗಿದ್ದಾರೆ. ಈಕೆ ಮೈಸೂರಿನ ಸಿಟಿ ಕ್ರೈಮ್ ಬ್ರಾಂಚ್ (ಸಿಸಿಬಿ) ವಿಭಾಗದಲ್ಲಿ ಮುಖ್ಯಪೇದೆ ಆಗಿರುವ ಶ್ರೀನಿವಾಸ ಪ್ರಸಾದ್ ಅವರ ಮಗಳು.


Share