ಮೈಸೂರು-ಸ್ಫೋಟಕ ವಸ್ತುಗಳು ಹಾಗೂ ಮಾರಕಾಸ್ತ್ರಗಳ ಬಳಕೆ ನಿಷೇಧ

75
Share

ಚಿತ್ರ ಕೃಪೆ ವಿಕಿಪೀಡಿಯ

ಶಸಾಸ್ತ್ರ ಸ್ಫೋಟಕ ವಸ್ತುಗಳು ಹಾಗೂ ಮಾರಕಾಸ್ತ್ರಗಳ ಬಳಕೆ ನಿಷೇಧ*

 ಮೈಸೂರು,ಮಾ.21:- ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಪ್ರಯುಕ್ತ ಮಾ.16 ರಿಂದ ಜೂ.06 ರವರೆಗೆ “ಸ್ಕ್ರೀನಿಂಗ್ ಕಮಿಟಿಯ ಸಭೆಯಲ್ಲಿ” ಬಂದೂಕನ್ನು ಠೇವಣಿ ಇಡುವುದರಿಂದ ವಿನಾಯಿತಿ ನೀಡಲು ತಿರ್ಮಾನಿಸಲಾದ ಅರ್ಜಿದಾರರನ್ನು ಹೊರತುಪಡಿಸಿ ಯಾವುದೇ ವ್ಯಕ್ತಿಗಳು ಶಸಾಸ್ತ್ರಗಳು, ಸ್ಫೋಟಕ ವಸ್ತುಗಳು ಹಾಗೂ ಮಾರಕಾಸ್ತ್ರಗಳನ್ನು ಒಯ್ಯುವ, ಅಥವಾ ಹಿಡಿದುಕೊಂಡು ಓಡಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

 ಎಲ್ಲಾ ಸ್ವರೂಪದ ಆಯುಧ ರಹದಾರಿ ಹೊಂದಿರುವವರು ಆಯುಧಗಳನ್ನು ಸಂಬoಧಪಟ್ಟ ಪೊಲೀಸ್ ಠಾಣೆಗಳಲ್ಲಿ ಡಿಪಾಸಿಟ್ ಮಾಡಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ ಡಾ. ರಾಜೇಂದ್ರ ಕೆ. ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share