ಮೈಸೂರು: ಸ್ವಾತಂತ್ರ್ಯೋತ್ಸವ, ತ್ರಿವರ್ಣ ಬಲೂನುಗಳ ಹಾರಾಟ.

364
Share

ಆಗಸ್ಟ್ 15 ರಂದು 74ನೇ ಸ್ವಾತಂತ್ರೋತ್ಸವ ದಿನಾಚರಣೆ
ಮೈಸೂರು.ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ಬನ್ನಿಮಂಟಪದ ಪಂಜಿನ ಕವಾಯಿತು ಮೈದಾನದಲ್ಲಿ 74ನೇ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಆಚರಿಸಲಾಗುವುದು.
ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವ ಸಂದೇಶ ನೀಡುವರು.
ಮುಖ್ಯ ಅತಿಥಿಗಳಾಗಿ ಮೈಸೂರು ಮಹಾನಗರ ಪಾಲಿಕೆಯ ಮೇಯರ್ ತಸ್ನೀಂ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪರಿಮಳ ಶ್ಯಾಂ, ಲೋಕಸಭಾ ಸದಸ್ಯರಾದ ಪ್ರತಾಪ ಸಿಂಹ, ವಿ.ಶ್ರೀನಿವಾಸ ಪ್ರಸಾದ್ ಹಾಗೂ ಸುಮಲತಾ ಅಂಬರೀಷ್ ಉಪಸ್ಥಿತರಿರುವರು.
ಸಮಾರಂಭದ ಅತಿಥಿಗಳಾಗಿ ವಿಧಾನಸಭಾ ಸದಸ್ಯರಾದ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಸಾ.ರಾ.ಮಹೇಶ್, ಎಲ್.ನಾಗೇಂದ್ರ, ಡಾ.ಯತೀಂದ್ರ ಸಿದ್ದರಾಮಯ್ಯ, ಹೆಚ್.ಪಿ. ಮಂಜುನಾಥ್, ಅನಿಲ್ ಚಿಕ್ಕಮಾದು, ಅಶ್ವಿನ್ ಕುಮಾರ್, ಬಿ.ಹರ್ಷವರ್ಧನ್, ಕೆ.ಮಹದೇವ್, ವಿಧಾನಪರಿಷತ್ ಸದಸ್ಯರಾದ ಹೆಚ್.ವಿಶ್ವನಾಥ್, ಮರಿತಿಬ್ಬೇಗೌಡ, ಎಸ್.ನಾಗರಾಜು, ಆರ್.ಧರ್ಮಸೇನ, ಕೆ.ವಿ. ನಾರಾಯಣಸ್ವಾಮಿ, ಕೆ.ಟಿ.ಶ್ರೀಕಂಠೇಗೌಡ, ಮೈಸೂರು ಮಹಾನಗರ ಪಾಲಿಕೆ ಉಪ ಮಹಾಪೌರಾದ ಸಿ. ಶ್ರೀಧರ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಗೌರಮ್ಮ ಸೋಮಶೇಖರ್, ತಾಲ್ಲೂಕು ಪಂಚಾಯತ್ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ, ಉಪಾಧ್ಯಕ್ಷ ಎನ್.ಬಿ.ಮಂಜು ಅವರು ಭಾಗವಹಿಸುವರು.
ಸಮಾರಂಭದಲ್ಲಿ ಪಥಸಂಚಲನ ಹಾಗೂ ಸ್ವಾತಂತ್ರ್ಯೋತ್ಸವದÀ ಅಂಗವಾಗಿ ತ್ರಿವರ್ಣ ಬಲೂನುಗಳನ್ನು ಹಾರಿಬಿಡಲಾಗುವುದು. ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು


Share