ಮೈಸೂರು, ಶುಕ್ರವಾರದಿಂದ ಸಂಜೆ 6:00 ಗಂಟೆಗೆ ವ್ಯಾಪಾರ ಬಂದ್! ಸಚಿವರ ಸ್ಪಷ್ಟನೆ.No Public Trafic after 6,PM

3083
Share

ಮೈಸೂರಿನಲ್ಲಿ ದಿನೇ ಹೆಚ್ಚುತ್ತಿರುವ ಕೊರೊನಾ ಪ್ರಕರಣ
ಶುಕ್ರವಾರದಿಂದ ಸಂಜೆ 6 ಗಂಟೆಗೆ ಎಲ್ಲಾ ವ್ಯಾಪಾರ ವಹಿವಾಟು ಬಂದ್
ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ.
ಸಂಜೆ 6 ಗಂಟೆಯ ನಂತರ ಯಾರೂ ರಸ್ತೆಯಲ್ಲಿ ಅನಗತ್ಯವಾಗಿ ಓಡಾಡುವಂತಿಲ್ಲ
ಮಾಸ್ಕ್ ಧರಿಸದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ನಗರಪಾಲಿಕೆ ವ್ಯಾಪ್ತಿಯಲ್ಲಿ 200 ರೂಪಾಯಿ ದಂಡ
ಗ್ರಾಮೀಣ ಪ್ರದೇಶದಲ್ಲಿ 100 ರೂಪಾಯಿ ದಂಡ
55 ವರ್ಷ ಮೇಲ್ಪಟ ಎಲ್ಲಾ ಪೊಲೀಸರಿಗೆ ಕಡ್ಡಾಯ ಕೊರನಾ ಟೆಸ್ಟ್
ಮಹಾನಗರ ಪಾಲಿಕೆ ಸಿಬ್ಬಂದಿಗೂ ಕಡ್ಡಾಯ ಟೆಸ್ಟ್ ಎಂದು ಹೇಳಿದರು.
ಸಿಬ್ಬಂದಿ ಹೆಚ್ಚಿಸುವ ಕಡೆ ಗಮನ ಕೊಡಲಾಗುವುದು
ಸಚಿವ ಎಸ್ ಟಿ ಸೋಮಶೇಖರ್ ಸ್ಪಷ್ಟ ವಾಗಿ ತಿಳಿಸಿದ್ದಾರೆ.

ಶುಕ್ರವಾರ ಸಂಜೆ 6ರ ನಂತರ ಮೈಸೂರಲಿಲ್ಲ ಸಾರ್ವಜನಿಕ ಸಂಚಾರ; ಸಚಿವ ಎಸ್ ಟಿ ಎಸ್

  • ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆ ಕ್ರಮ
  • ಮಾಸ್ಕ್ ಹಾಕದೆ ಹೊರಬಂದರೆ ದಂಡ
  • ಅಗತ್ಯಬಿದ್ದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವವರಿಗೂ ದಂಡ
  • 55 ವರ್ಷ ಮೇಲ್ಪಟ್ಟ ಪೊಲೀಸರಿಗೆ ಪರೀಕ್ಷೆ
    15 ದಿನಗಳಲ್ಲಿ ಎಲ್ಲ 42685 ಆಶಾ ಕಾರ್ಯಕರ್ತೆಯರಿಗೂ ವಿತರಣೆ; ಸಚಿವ ಸೋಮಶೇಖರ್ ಸ್ಪಷ್ಟನೆ

ಮೈಸೂರು: ಮಾಸ್ಕ್ ಹಾಕದೇ ಹೊರಬರುವವರಿಗೆ ದಂಡ ಹಾಗೂ ಸಂಜೆ 6 ಗಂಟೆ ನಂತರ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸುತ್ತಿದ್ದೇವೆ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಇಲ್ಲಿನ ನೂತನ ಜಿಲ್ಲಾ ಕಚೇರಿಗಳ ಸಂಕೀರ್ಣದಲ್ಲಿ ಜಿಲ್ಲಾಧಿಕಾರಿಗಳು, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೊರೋನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ತರಲು ಸಾರ್ವಜನಿಕರ ಸಹಕಾರ ಹಾಗೂ ಜವಾಬ್ದಾರಿ ಸಹ ದೊಡ್ಡದು. ಈ ಹಿನ್ನೆಲೆಯಲ್ಲಿ ಇನ್ನು ಮಾಸ್ಕ್ ಹಾಕದೇ ಹೊರ ಬರುವುದು ಕಂಡರೆ ಪೊಲೀಸರು ದಂಡಹಾಕಲಿದ್ದಾರೆ ನಗರ ಪ್ರದೇಶಗಳಲ್ಲಿ ಮಾಸ್ಕ್ ಹಾಕದವರಿಗೆ 200 ರೂಪಾಯಿ ಹಾಗೂ ಗ್ರಾಮಾಂತರದಲ್ಲಿ 100 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದರು.

ಜೊತೆಗೆ ಸಾಮಾಜಿಕ ಅಂತರವನ್ನೂ ಕಾಯ್ದುಕೊಳ್ಳಬೇಕು. ಈಗ ಬಾಯಿ ಮಾತಿನಲ್ಲಿ ಹೇಳಲಾಗುತ್ತದೆ. ಆಗಲೂ ಜನತೆ ಎಚ್ಚೆತ್ತುಕೊಳ್ಳದೆ ಗುಂಪು ಗುಂಪಾಗಿ ಕಾಣಿಸಿಕೊಂಡರೆ ದಂಡ ವಿಧಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಐಎಲ್ಐ ಮತ್ತು ಸ್ಯಾರಿ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಅಂಗಡಿ-ಮುಂಗಟ್ಟುಗಳನ್ನು ಸಂಜೆ 6 ಗಂಟೆ ನಂತರ ಸದ್ಯದ ಮಟ್ಟಿಗೆ ಬಂದ್ ಮಾಡುವ ತೀರ್ಮಾನಕ್ಕೆ ಬರಲಾಗಿದೆ. ಶುಕ್ರವಾರದಿಂದ ಮೈಸೂರು ಜಿಲ್ಲೆಯಲ್ಲಿ ಈ ಆದೇಶ ಅನುಷ್ಠಾನಕ್ಕೆ ಬರಲಿದೆ ಎಂದು ಸಚಿವರು ತಿಳಿಸಿದರು.

ಎಪಿಎಂಸಿಯಲ್ಲಿ ವ್ಯವಹಾರ ಮಾಡುವವರಿಗೆ ಹಾಗೂ ತರಕಾರಿ ಮಾರಾಟ ಮಾಡುವವರಿಗೆ ಕಡ್ಡಾಯವಾಗಿ ಸ್ಕ್ರೀನಿಂಗ್ ಮಾಡಿಸಲಾಗುತ್ತದೆ. ಕಾರಣ ಅಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಒಂದೆಡೆ ಸೇರುವುದರಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

55 ವರ್ಷ ಮೇಲ್ಪಟ್ಟ ಪೊಲೀಸರಿಗೆ ಪರೀಕ್ಷೆ

ಪೊಲೀಸ್ ಇಲಾಖೆಯಲ್ಲಿ 55 ವರ್ಷ ಮೇಲ್ಪಟ್ಟವರ ಮೇಲೆ ಅದರಲ್ಲೂ ಅವರ ಆರೋಗ್ಯದ ಸ್ಥಿತಿ ನೋಡಿಕೊಂಡು ಹೆಚ್ಚಿನ ಆದ್ಯತೆ ಮಾಡಿ ಅವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಗೊಳಪಡಿಸುವ ತೀರ್ಮಾನಕ್ಕೆ ಬರಲಾಗಿದೆ ಎಂದು ಸಚಿವರು ತಿಳಿಸಿದರು.

ಜಿಲ್ಲಾಡಳಿತ-ವೈದ್ಯರಿಗೆ ಅಭಿನಂದನೆ

ಮೈಸೂರಿನಲ್ಲಿ ಜಿಲ್ಲಾಡಾಳಿತ ಹಾಗೂ ವೈದ್ಯರ ತಂಡ ಉತ್ತಮವಾಗಿ ಕಾರ್ಯನಿರ್ವಹಣೆ ಮಾಡುತ್ತಿದೆ. ಅವರಿಗೆ ಸಾರ್ವಜನಿಕರ ಸಹಕಾರ ಮುಖ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ನಾನು ವೈಯುಕ್ತಿಕವಾಗಿ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

15 ದಿನಗಳಲ್ಲಿ ಎಲ್ಲ 42685 ಆಶಾ ಕಾರ್ಯಕರ್ತೆಯರಿಗೂ ವಿತರಣೆ

ಪ್ರತಿ ಜಿಲ್ಲೆಯಲ್ಲಿ ಸಹಾಯಧನ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಗ್ರಾಮೀಣ ಪ್ರದೇಶ ಸೇರಿದಂತೆ ಎಲ್ಲ ಕಡೆ ಅನುದಾನ ನೀಡಲಾಗುತ್ತಿದೆ. ಬಳಿಕ ಆಯಾ ಕ್ಷೇತ್ರದ ಶಾಸಕರು ವಿತರಣೆ ಮಾಡುತ್ತಾರೆ. ಗ್ರಾಮೀಣ ಭಾಗದಲ್ಲಿ ವಿತರಣೆ ಮಾಡುತ್ತಿಲ್ಲ ಎಂಬುದು ಸುಳ್ಳು. ಅದಕ್ಕೋಸ್ಕರ ಪ್ರತಿ ಜಿಲ್ಲೆಗೆ ನಾನೇ ಖುದ್ದು ಭೇಟಿ ನೀಡಿ ವಿತರಣೆ ಮಾಡುತ್ತಿದ್ದೇನೆ. ಇನ್ನು 15 ದಿನಗಳಲ್ಲಿ ಎಲ್ಲ 42685 ಆಶಾ ಕಾರ್ಯಕರ್ತೆಯರಿಗೂ ವಿತರಣೆಯಾಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು ಈ ಸಂದರ್ಭದಲ್ಲಿ ಸಂಸದರು ಮತ್ತು ಶಾಸಕರು ಉಪಸ್ಥಿತರಿದ್ದರು

No public traffic after 6pm on Friday; Minister S.T.S.

  • Covid case increase background action
  • Penalty for leaving without mask
  • Penalties for those who do not maintain social distance if necessary
  • Examination for policemen over 55 years of age
    Delivery to all 42685 Asha operatives within 15 days; Minister Somashekhar clarified

Mysore: For those who leave without a mask, we will impose penalties and restrict public access after 6 pm, said ST Somashekhar, Minister in charge of Co-operation and District.

Speaking to reporters after meeting with district officials, police and health officials, including senior officials at the new district office complex, the minister said the public’s cooperation and responsibility to control the corona case was growing. In this case, the police will be penalized if they do not get a mask.

And maintain a social gap. Now word of mouth is said. The minister said that even if the people appeared to be a group of people without warning, the process of imposing penalties would be initiated.

As the number of ILI and Saree cases is on the rise, it has been decided to close the storefront after 6 pm. The ordinance will be implemented in Mysore district from Friday, the minister said.

Mandatory screening for traders and vegetable vendors at APMC. The minister said that the decision was taken due to the large number of people coming together.

Examination for policemen over 55 years of age

The minister said that it was decided to test the number of persons over the age of 55 years in the police department, especially with regard to their health.

Congratulations to the sheriff-doctor

Mysore district and doctors team is doing well. Public cooperation is important to them. I congratulate both the Government and the Government personally.

Delivery to all 42685 Asha activists in 15 days

Running a subsidy program in each district. Grants are being provided everywhere. The respective constituency lawmakers then distribute. It is a lie that there is no distribution in the rural part. For that reason, I visit and distribute to each district firsthand. The minister made it clear that within the next 15 days, all 42685 Asha activists will be distributed.


Share