ಲೋಕಸಭಾ ಚುನಾವಣೆ ಸಂಬಂಧದ ಸಿದ್ದತೆ, ಸಭೆ

52
Share

ಬೆಂಗಳೂರು-ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಲೋಕಸಭಾ ಚುನಾವಣೆ ಸಂಬಂಧದ ಸಿದ್ದತೆಗಳನ್ನು ತೀವ್ರಗೊಳಿಸುವ ಸಂಬಂಧ ಸಚಿವರು, ಹಿರಿಯ ಶಾಸಕರು ಮತ್ತು ಸಂಭಾವ್ಯ ಅಭ್ಯರ್ಥಿಗಳ ಸಭೆ ನಡೆಯಿತು.

ಸಂಭಾವ್ಯ ಅಭ್ಯರ್ಥಿಗಳಾದ ಬಾಗಲಕೋಟೆ ಸಂಯುಕ್ತ ಪಾಟೀಲ್, ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಮನ್ಸೂರ್ ಅಲಿ ಖಾನ್, ವಿನೋದ್ ಹಸೂಟಿ ಧಾರವಾಡ, ಚಿತ್ರದುರ್ಗದ ಚಂದ್ರಪ್ಪ, ಉಡುಪಿ ಜಯಪ್ರಕಾಶ್ ಹೆಗ್ಡೆ, ತುಮಕೂರು ಮುದ್ದಹನುಮೇಗೌಡ, ದಕ್ಷಿಣ ಕನ್ನಡ ಪದ್ಮರಾಜ್, ಬಳ್ಳಾರಿಯ ಹಿರಿಯ ಶಾಸಕರಾದ ಈ.ತುಕಾರಾಂ, ರಾಯಚೂರು ಕುಮಾರನಾಯ್ಕ್, ಬೆಂಗಳೂರು ದಕ್ಷಿಣದ ಸೌಮ್ಯ ರೆಡ್ಡಿ, ಉತ್ತರ ಕನ್ನಡ ಅಂಜಲಿ ನಿಂಬಾಳ್ಕರ್, ಮಂಡ್ಯ ವೆಂಕಟರಮಣೇಗೌಡ, ಮೈಸೂರು ಲಕ್ಷ್ಮಣ್ ,ಬೆಂಗಳೂರು ಉತ್ತರದ ರಾಜೀವ್ ಗೌಡ, ಬೀದರ್ ಸಾಗರ್ ಖಂಡ್ರೆ, ಮೃಣಾಳ್ ಹೆಬ್ಬಾಳ್ಕರ್ ಸೇರಿ ಹಲವರು ಉಪಸ್ಥಿತರಿದ್ದರು.

ಸಚಿವರಾದ ಹೆಚ್.ಸಿ.ಮಹದೇವಪ್ಪ, ಸಂತೋಷ್ ಎಸ್ ಲಾಡ್, ತಿಮ್ಮಾಪುರ, ಜಮೀರ್ ಅಹಮದ್ ಖಾನ್, ಎಂ.ಸಿ.ಸುಧಾಕರ್, ಶರಣಪ್ರಕಾಶ್ ಪಾಟೀಲ್, ಹೆಚ್.ಕೆ.ಪಾಟೀಲ್, ಕೆ.ಎನ್.ರಾಜಣ್ಣ, ಕೆ.ವೆಂಕಟೇಶ್, ರಾಮಲಿಂಗಾರೆಡ್ಡಿ, ಬೈರತಿ ಸುರೇಶ್, ಪ್ರಿಯಾಂಕ್ ಖರ್ಗೆ, ಮಧು ಬಂಗಾರಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಈಶ್ವರ್ ಖಂಡ್ರೆ, ಶಿವಾನಂದ ಪಾಟೀಲ್, ಡಿ.ಸುಧಾಕರ್, ರಹೀಂ ಖಾನ್, ಮಂಕಾಳ ವೈದ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ರಾಯರೆಡ್ಡಿ, ಪಕ್ಷದ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಶಾಸಕರಾದ ಶಿವಲಿಂಗೇಗೌಡರು, ಚನ್ನರಾಜು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

 


Share