ಲೋಕಸಭಾ ಚುನಾವಣೆ : ಸುಸ್ಥಿರಾಭಿವೃದ್ಧಿ ಚುನಾವಣೆ

169
Share

ನವದೆಹಲಿ: 2024 ರ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ ಪ್ರಮಾಣದಲ್ಲಿ ಕಾಗದದ ಬಳಕೆ, ಪರಿಸರ ಸ್ನೇಹಿ ವಾಹನಗಳ ಬಳಕೆಗೆ ಆದ್ಯತೆ, ಒಂದೇ ಬಾರಿಗೆ ಬಳಸಬಹುದಾದ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಗೆ ಕಡಿವಾಣ, ಕಾರ್‌ಪೂಲಿಂಗ್‌ಗೆ ಉತ್ತೇಜನ ಸೇರಿ ಹಲವು ಕ್ರಮಗಳಿಗೆ ಚುನಾವಣಾ ಆಯೋಗ ಮುಂದಾಗಿ ಪರಿಸರ ಪ್ರೇಮಿ ಚುನಾವಣೆ ನಡೆಸಲು ನಿರ್ಧರಿಸಿದೆ ಎಂದು ತಿಳಿಸಿವೆ.
ಚುನಾವಣಾಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳಿಗೆ ಈ ಕುರಿತು ಸ್ಪಷ್ಟ ಸೂಚನೆಗಳನ್ನು ನೀಡಿರುವ ಆಯೋಗವು ಈ ಮೂಲಕ ಲೋಕಸಭೆಯ ಸಾರ್ವತ್ರಿಕ ಚುನಾವಣೆಯನ್ನು ‘ಸುಸ್ಥಿರಾಭಿವೃದ್ಧಿ ಚುನಾವಣೆ’ಯಾಗಿಸುವ ಗುರಿಯನ್ನು ಹೊಂದಿದೆ.
ಚುನಾವಣೆಗೆ ಸಂಬಂಧಿಸಿದ ಪ್ರತಿ ಕಾರ್ಯಕ್ರಮಗಳೂ ಆದಷ್ಟು ಪರಿಸರ ಸ್ನೇಹಿಯಾಗಿರಬೇಕು ಎಂಬುದು ಆಯೋಗದ ಉದ್ದೇಶವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾ‌ರ್ ಅವರು ತಿಳಿಸಿದ್ದಾರೆ.
ಸುಸ್ಥಿರಾಭಿವೃದ್ಧಿ ಮತ್ತು ಪರಿಸರ ಸ್ನೇಹಿ ಚುನಾವಣೆ ನಡೆಸುವ ಕ್ರಮವಾಗಿ ಹಲವು ಕ್ರಮಕ್ಕೆ ಮುಂದಾಗಿದ್ದೇವೆ. ಒಂದು ಬಾರಿಯಷ್ಟೇ ಬಳಸಬಹುದಾದ ಪ್ಲಾಸ್ಟಿಕ್‌ಗಳ ಬಳಕೆಗೆ ಕಡಿವಾಣ ಹಾಕಲು ಸೂಚಿಸಲಾಗಿದೆ. ಇದು ಸೇರಿದಂತೆ ಹಲವು ನಿರ್ದೇಶನಗಳನ್ನು ನೀಡಲಾಗಿದೆ. ತ್ಯಾಜ್ಯ ನಿರ್ವಹಣೆಗೆ ಒತ್ತು ನೀಡಬೇಕು. ಕಾಗದದ ಬಳಕೆಯನ್ನು ಆದಷ್ಟೂ ಕಡಿಮೆ ಮಾಡಬೇಕು ಎಂದು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.


Share