ಸುಧಾಮೂರ್ತಿ ಅವರಿಗೆ ಸಚಿವರ ಪತ್ರ

562
Share

ಭಾರತ ದೇಶವು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕ್ರಾಂತಿ ಮಾಡಲು ಶಿಕ್ಷಣ, ಸಾಮಾಜಿಕ, ಆರ್ಥಿಕ ಮತ್ತು ಧಾರ್ಮಿಕ ವಲಯಗಳ ಅಭಿವೃದ್ಧಿಗಾಗಿ ತಮ್ಮದೇ ಆದ ರೀತಿಯಲ್ಲಿ ಸಹಕಾರ ನೀಡುತ್ತಿದ್ದು, ಮುಖ್ಯವಾಗಿ ದೇಶದ ಆರ್ಥಿಕತೆಯ ಬೆಳವಣಿಗೆಗೆ ತಮ್ಮ ಸಂಸ್ಥೆಯು ಪ್ರತ್ಯಕ್ಷವಾಗಿ ಹಾಗು ಪರೋಕ್ಷವಾಗಿ ಲಕ್ಷಾಂತರ ಜನರಿಗೆ ಉದ್ಯೋಗ ಮತ್ತು ಅವಲಂಬಿತ ಕುಟುಂಬಗಳಿಗೆ ಶ್ರೀಯುತ ನಾರಾಯಣ ಮೂರ್ತಿ ಅವರು ಮತ್ತು ತಾವು ಆಸರೆಯಾಗಿದ್ದು, ತಾವುಗಳು ಭಗವಂತನ ಕೃಪೆಯಿಂದ ಮತ್ತಷ್ಟು ಹೆಚ್ಚಿನ ಸೇವೆ ಸಲ್ಲಿಸಲು ಆಯಸ್ಸು, ಆರೋಗ್ಯವನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ. ಇದಲ್ಲದೆ ತಾವು ನಿನದ 24 ಗಂಟೆಯ ಬಿಡುವಿಲ್ಲದೆ ಅಹರ್ನಿಶಿ ಜನಸೇವೆಯಲ್ಲಿ ತೊಡಗಿಸಿಕೊಂಡು ನಮ್ಮಂತವರಿಗೆ ಮಾದರಿಯಾಗಿದ್ದೀರಿ.

ಸಹಕಾರ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿರುವ ನಾನು ಇತ್ತೀಚೆಗೆ ಸುಮಾರು 125 ವರ್ಷಕ್ಕೂ ಹೆಚ್ಚು ಇತಿಹಾಸವನ್ನು ಹೊಂದಿರುವ ಶ್ರೀ ಜಯಚಾಮರಾಜೇಂದ್ರ ಮೃಗಾಲಯಕ್ಕೆ ಭೇಟಿ ನೀಡಿದ್ದೆ. ಮೃಗಾಲಯವು ಸ್ವಾಯತ್ತ ಸಂಸ್ಥೆಯಾಗಿದ್ದು, 2002ರಿಂದ ಸರ್ಕಾರದಿಂದ ಯಾವುದೇ ಆರ್ಥಿಕ ಸಹಾಯ ಪಡೆಯದೆ ವೀಕ್ಷಕರು ನೀಡುವ ಹಣದಿಂದಲೇ ಪ್ರಾಣಿಗಳ ಮತ್ತು ಪಕ್ಷಿಗಳ ಆಹಾರ, ಸಿಬ್ಬಂದಿ ವೇತನ ಹಾಗೂ ಮ್ರಗಾಲಯದ ನಿರ್ವಹಣೆಯನ್ನು ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಮಾಡಲಾಗುತ್ತಿದೆ ಎಂಬ ಅಂಶವನ್ನು ತಮ್ಮ ಗಮನಕ್ಕೆ ತರಲಾಗುತ್ತಿದ್ದು, ಅಲ್ಲಿನ ಪ್ರಾಣಿ ಮತ್ತು ಪಕ್ಷಿಗಳಿಗೆ ಮೃಗಾಲಯದ ಅಧಿಕಾರಿಗಳು ಅತ್ಯಂತ ವ್ಯವಸ್ಥಿತವಾಗಿ ನೋಡಿಕೊಳ್ಳುತ್ತಿದ್ದಾಗ್ಯೂ ಸಹ ನನ್ನ ಮತಕ್ಷೇತ್ರವಾದ ಯಶವಂತಪುರದ ದಾನಿಗಳಿಂದ ಸುಮಾರು ರೂ. 73.16 ಲಕ್ಷಗಳ ಮೊತ್ತವನ್ನು ಸಂಗ್ರಹಿಸಿ ನೀಡಲಾಗಿರುತ್ತದೆ, ಮತ್ತೆ ಇಂದು ದಿನಾಂಕ: 02.05.2020ರಂದು ರೂ. 45.30 ಲಕ್ಷಗಳ ಚೆಕ್ಕುಗಳನ್ನು ಮೃಗಾಲಯದ ಅಧಿಕಾರಿಗಳಿಗೆ ಹಸ್ತಾಂತರಿಸಲಿದ್ದೇನೆ.

ದಯಮಾಡಿ, ತಾವು ಕೂಡ ಕಮ್ಮ ಇನ್ಫೋಸಿಸ್ ಫೌಂಡೇಷನ್ ವತಿಯಿಂದ ಮೃಗಾಲಯದ ಪ್ರಾಣಿಗಳು ಮತ್ತು ಪಕ್ಷಿಗಳಿಗೆ ಆಹಾರ ಮತ್ತು ಇನ್ನಿತರೆ ಸೌಲಭ್ಯಗಳಿಗೆ ಆರ್ಥಿಕ ಸಹಾಯವನ್ನು ಮಾಡಬೇಕೆಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿ ತಮ್ಮಲಿ ಮನವಿ ಮಾಡುತ್ತೇನೆ.


Share