ಸೈಬರ್ ಕ್ರೈಂ ಗಳ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಅಗತ್ಯ: ರೇಣುಕಾರಾಧ್ಯ

160
Share

ಸೈಬರ್ ಕ್ರೈಂ ಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಅಗತ್ಯ: ಎಚ್ ಎಸ್ ರೇಣುಕಾರಾಧ್ಯ

ಅಪರಾದ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹು ಮುಖ್ಯವಾದದ್ದು. ಕ್ಷಣ ಮಾತ್ರದಲ್ಲಿ ಆಗುವ ಅಹಿತಕರ ಘಟನೆಗಳ ಬಗ್ಗೆ ನಾವು ಎಚ್ಚೆತ್ತುಕೊಳ್ಳದೆ ಹೋದಲ್ಲಿ ನಾವು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ದುರ್ಬಳಕೆ, ಸೈಬರ್ ಕ್ರೈಮ್ ಇವುಗಳ ಬಗ್ಗೆ ಜಾಗೃತಿ ಹೊಂದುವುದು ಅತಿ ಅವಶ್ಯಕ ಎಂದು ಕೆಪಿಎ ಪೊಲೀಸ್ ಉಪಾಧೀಕ್ಷಕರು ಎಚ್ ಎಸ್ ರೇಣುಕಾರಾಧ್ಯ
ಎಂದರು.

ಮೈಸೂರು: ಸರಸ್ವತಿಪುರಂನಲ್ಲಿರುವ ಟಿ ಟಿಎಲ್ ಕಾಲೇಜ್ ಆವರಣದಲ್ಲಿ
ಟಿ.ಟಿ.ಎಲ್ ಟ್ರಸ್ಟ್ ಮತ್ತು ಅಖಿಲಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ಹಾಗೂ ಟಿ.ಟಿ.ಎಲ್ ವಾಣಿಜ್ಯ ವ್ಯವಹಾರ ನಿರ್ವಹಣಾ ಕಾಲೇಜು ,ಟಿ.ಟಿ.ಎಲ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕ ಆಯೋಜಿಸಿರುವ ಸೈಬರ್ ಅಪರಾಧ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು

ಇತ್ತೀಚೆಗೆ ಅಂತರ್ಜಾಲದ ದುರುಪಯೋಗ ಹೆಚ್ಚಾಗುತ್ತಿದೆ. ಜನರು ಒಂದು ಸಣ್ಣ ತಪ್ಪಿನಿಂದಾಗಿ ಹಣ ಹಾಗೂ ಮಹತ್ವದ ಮಾಹಿತಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಮೂಲಕ ತಿಳಿದೋ ಅಥವಾ ತಿಳಿಯದೆಯೋ ವಿವಿಧ ಸಂಕಷ್ಟಗಳಿಗೆ ಸಿಲುಕಿ ನಲುಗುತ್ತಿದ್ದಾರೆ ಎಂದರು.
ಸೈಬರ್ ಕ್ರೈಂ ತಡೆಯುವ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವುದು ಅತ್ಯಗತ್ಯ. ಸರ್ಕಾರಿ ಸಂಸ್ಥೆಗಳಲ್ಲೂ ಸಹ ಪ್ರತೀ ಕೆಲಸದಲ್ಲಿಯೂ ಕಂಪ್ಯೂಟರ್, ವಾಟ್‌ಸ್‌ಆಫ್, ಪೇಸ್ಬುಕ್ ಹೀಗೆ ಸಾಮಾಜಿಕ ಜಾಲತಾಣಗಳನ್ನು ಬಳಸುತ್ತೇವೆ. ಆದ್ದರಿಂದ ಈ ಬಗ್ಗೆ ತಿಳಿದುಕೊಳ್ಳಬೇಕು ಮತ್ತು ಜಾಗೃತರಾಗಬೇಕು ಎಂದು ಅವರು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಟಿ.ಟಿ.ಎಲ್ ಟ್ರಸ್ಟ್ ನ ಆಡಳಿತ ಮತ್ತು ನಿಯೋಜನ ಅಧಿಕಾರಿ ಡಾಕ್ಟರ್ ಬಿ ವಿ ಪ್ರಶಾಂತ್, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷರಾದ ಡಾ ಜಿ ವಿ ರವಿಶಂಕರ್, ಸಂಘಟನಾ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಪದವಿ ಕಾಲೇಜಿನ ಪ್ರಾಂಶುಪಾಲರಾದ ಶಶಿಕಲಾ ಎಸ್ ಆರ್, ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಬ್ರಹ್ಮರಂಬ ಎಸ್,
ಕಾಲೇಜಿನ ರೆಡ್ ಕ್ರಾಸ್ ಅಧಿಕಾರಿ ಗಿರೀಶ್ ಹಾಗೂ ಇನ್ನಿತರರು ಭಾಗವಹಿಸಿದ್ದರು


Share