ಹುಳಿಮಾವು ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ವೇಳೆ ಮದ್ಯ ನಿಷೇಧ

349
Share

ಹುಳಿಮಾವು ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ವೇಳೆ ಮದ್ಯ ನಿಷೇಧ
ಮೈಸೂರು,):- ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹುಳಿಮಾವು ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಮತದಾನ ನಡೆಯುವ ವ್ಯಾಪ್ತಿಯಲ್ಲಿ ಮತದಾನದ ದಿನ ಹಾಗೂ ಮತ ಎಣಿಕೆ ದಿನ ಮುಗಿಯುವವÀರೆಗೆ ಮದ್ಯ ಮಾರಾಟ ಹಾಗೂ ಸಾಗಾಣಿಕೆಯನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಆದೇಶಿಸಿದ್ದಾರೆ.
ಗ್ರಾಮ ಪಂಚಾಯತ್ ಚುನಾವಣೆ 2021ರ ಮತದಾನ ಮತ್ತು ಮತದಾನದ ಎಣಿಕೆ ಕಾರ್ಯವನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು 1967ರ ನಿಯಮ 10-ಬಿ ಮತ್ತು ಅಬಕಾರಿ ಕಾಯ್ದೆ 1965ರ ಕಾಲಮ್ 21ರ ಅಡಿಯಲ್ಲಿ ಪ್ರಾಯೋಜಿತವಾಗಿರುವ ಅಧಿಕಾರ ಚಲಾಯಿಸಿ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹುಳಿಮಾವು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಮಾರ್ಚ್ 28 ಮಧ್ಯರಾತ್ರಿ 12.00 ಗಂಟೆಯಿAದ ಮಾರ್ಚ್ 29 ಮಧ್ಯರಾತ್ರಿ 12ಗಂಟೆಯವರೆಗೆ ಹಾಗೂ ಮತದಾನದ ಎಣಿಕೆಯ ಸಂಬAಧ ತಾಲ್ಲೂಕು ಕೇಂದ್ರದಲ್ಲಿ ಮಾರ್ಚ್ 30 ಮಧ್ಯರಾತ್ರಿ 12.00 ಗಂಟೆಯಿAದ ಮಾರ್ಚ್ 31 ಮಧ್ಯರಾತ್ರಿ 12ಗಂಟೆಯವರೆಗೆ ಎಲ್ಲಾ ರೀತಿಯ ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು, ಅಧಿಬೋಗದಾರರು ಮತ್ತು ಸಂದರ್ಭಾನುಸಾರ ವ್ಯವಸ್ಥಾಪಕರು ಮುಚ್ಚಲು ಹಾಗೂ ಪೊಹರು ಮಾಡಿ ಅದರ ಕೀಗಳನ್ನು ಕಾರ್ಯನಿರ್ವಾಹಕ ಮ್ಯಾಜಿಸ್ಟೆçÃಟರ್‌ಗೆ ಒಪ್ಪಿಸಲು ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share