05/03/2022 ರ ಸರ್ಕಾರಿ ಅರ್ಜಿ ಆಹ್ವಾನ

294
Share

ಅರೆಕಾಲಿಕ ಯೋಗ ತರಬೇತುದಾರರ ಹುದ್ದೆಗೆ ಅರ್ಜಿ ಆಹ್ವಾನ

ರಾಮನಗರ : ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಅರೆ ಕಾಲಿಕ ಯೋಗ ತರಬೇತುದಾರರನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ರಾಮನಗರ ತಾಲ್ಲೂಕಿನ ತುಂಬೇನಹಳ್ಳಿ, ಕನಕಪುರ ತಾಲ್ಲೂಕಿನ ಹೊರಳಗಲ್ಲು, ಬಿಜ್ಜಹಳ್ಳಿ, ಹಾಗೂ ಮಾಗಡಿ ತಾಲ್ಲೂಕಿನ ಮೋಟಗಾನಹಳ್ಳಿಯ ಸರ್ಕಾರಿ ಆಯುಷ್ ಚಿಕಿತ್ಸಾಲಯದಲ್ಲಿ ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸುವವರು ೧೦+೨ ಉತ್ತೀರ್ಣರಾಗಿರಬೇಕು, ಯೋಗ ತರಬೇತಿ ಹೊಂದಿದ ಪ್ರಮಾಣ ಪತ್ರ ಪಡೆದಿರಬೇಕು, ಯೋಗ ತರಬೇತಿ ಸರ್ಟಿಫೀಕೇಟ್ (ಬೋರ್ಡ್ನಿಂದ) ಅಥವಾ ಮಾನ್ಯತೆ ಪಡೆದ ಸಂಸ್ಥೆಯಿAದ ಪ್ರಮಾಣ ಪತ್ರ ಹೊಂದಿರಬೇಕು. ಸ್ಥಳೀಯ ಅಭ್ಯರ್ಥಿಗಳಿಗೆ ಅದ್ಯತೆ ನೀಡಲಾಗುವುದು.
ಆಸಕ್ತರು ಮಾರ್ಚ್ ೧೦ ರೊಳಗಾಗಿ ರಾಮನಗರ ಜಿಲ್ಲಾ ಆಯುಷ್ ಕಛೇರಿಯಿಂದ ಅರ್ಜಿ ಪಡೆದು ಸೂಕ್ತ ವಿವರಗಳನ್ನು ಭರ್ತಿ ಮಾಡಿ ಸಲ್ಲಿಸುವುದು. ಹೆಚ್ಚಿನ ವಿವರಗಳಿಗೆ ದೂ.ಸ : ೦೮೦-೨೭೨೭೨೭೦೪ ಸಂಪರ್ಕಿಸುವುದು ಎಂದು ರಾಮನಗರ ಜಿಲ್ಲಾ ಆಯುಷ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಹಹಹಹಹಹಹಹಹ
ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

:ರಾಮನಗರ : ಕನಕಪುರ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ೨೦೨೧-೨೨ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ಪ್ರವರ್ಗ-೧ ವಿದ್ಯಾರ್ಥಿಗಳಿಂದ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ “ಶುಲ್ಕವಿನಾಯಿತಿ”, “ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ”, ಸೌಲಭ್ಯಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿತ್ತು, ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದ್ದು ಮಾರ್ಚ್ ೩೧ ರೊಳಗಾಗಿ ಸಲ್ಲಿಸಬಹುದಾಗಿದೆ.
ಅರ್ಹ ವಿದ್ಯಾರ್ಥಿಗಳು ಸಂಬAಧ ಪಟ್ಟ ದಾಖಲಾತಿಳೊಂದಿಗೆ ಆನ್‌ಲೈನ್ ಮೂಲಕ ಅರ್ಜಿ/ದಾಖಲೆಗಳನ್ನು ಇಲಾಖೆಯ ವೆಬ್‌ಸೈಟ್ WWW.ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ/೨೧೨೨ ಮೂಲಕ ಆಪ್‌ಲೋಡ್ ಮಾಡಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆ ವೆಬ್‌ಸೈಟ್ ಠಿosಣmಚಿಣಡಿiಛಿheಟಠಿ@ಞಚಿಡಿಟಿಚಿಣಚಿಞಚಿ.gov.iಟಿ ಅಥವಾ ದೂರವಾಣಿ – ೦೮೦-೨೭೫೨೨೨೫೪, ೮೦೫೦೭೭೦೦೦೫, ೮೦೫೦೭೭೦೦೦೪, ಸಂಪರ್ಕಿಸುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಹಹಹಳಳಳಳಳಳಳಳ.
ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಮೈಸೂರು, :- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆಅಲೆಮಾರಿ, ಪ್ರವರ್ಗ-1 ವಿದ್ಯಾರ್ಥಿಗಳಿಂದ 2021-22ನೇ ಸಾಲಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ಊಟ ಮತ್ತು ವಸತಿ ಸಹಾಯ ಯೋಜನೆ(ವಿದ್ಯಾಸಿರಿ) ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಸಲ್ಲಿಸುವ ಅರ್ಜಿಯ ದಿನಾಂಕವನ್ನು 2022ರ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತ ವಿದ್ಯಾರ್ಥಿಗಳು ಇಲಾಖೆಯ www.ssp.postmatric.karnataka.gov.in ವೆಬ್‌ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬAಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ತಿಳಿಯಲು ಹೆಚ್ಚಿನ ಮಾಹಿತಿಗಾಗಿ www.bcwd.karnataka.gov.in ವೆಬ್‌ಸೈಟ್‌ಅನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಆಸಕ್ತ ವಿದ್ಯಾರ್ಥಿಗಳು ಮೊ.ಸಂ. 8050770005, 8050770004 ಹಾಗೂ ದೂ.ಸಂ. 080-35254757ಅನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಹಹಹಹ್ಮಹಹಹಹ
ಎನ್‌ಸಿಎಸ್‌ಪಿ ಯೋಜನೆಯಡಿ ಉದ್ಯೋಗ ಮೇಳ
ಮೈಸೂರು, :- ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ “ಆಜಾದಿ ಕಾ ಅಮೃತ್ ಮಹೋತ್ಸವ್” ಆಚರಣೆಯ ಪ್ರಯುಕ್ತ 2022ರ ಮಾರ್ಚ್ 09ರಂದು ಎನ್‌ಸಿಎಸ್‌ಪಿ ಯೋಜನೆಯಡಿ ಉದ್ಯೋಗ ಮೇಳವನ್ನು ಎನ್.ಆರ್.ಮೋಹಲ್ಲಾದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿ ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ ಪಾಸು/ಫೇಲು, ಪಿಯುಸಿ/ಪದವಿ/ ಐಟಿಐ/ಡಿಪ್ಲೋಮ/ಎಂ.ಬಿ.ಎ/ಸ್ನಾತಕೋತ್ತರದಲ್ಲಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷ ವಯೋಮಿತಿ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು 2022ರ ಮಾರ್ಚ್ 09ರಂದು ಬೆಳಿಗ್ಗೆ 10ಗಂಟೆಯಿAದ 4 ಗಂಟೆಯವರೆಗೆ, ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಉದ್ಯೋಗ ಮೇಳಕ್ಕೆ ಮೈಸೂರು-ಬೆಂಗಳೂರಿನ ಹೆಸರಾಂತ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆಯ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಗಳು ಮತ್ತು ಆಧಾರ್ ಕಾರ್ಡ್, ಸ್ವ-ವಿವರವುಳ್ಳ 10 ಬಯೋಡೇಟಾ ಪ್ರತಿಗಳೊಂದಿಗೆ ಹಾಜರಾಗಿ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿರುವ ಸಹಾಯಕ ನಿರ್ದೇಶಕರ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 0821-2489972ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸದ್ದಾರೆ.
ಹಹಹಹಹಹಹಹಹಹ.
ನಂಜನಗೂಡು: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಮೈಸೂರು, ಮಾರ್ಚ್ 03 :- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆಅಲೆಮಾರಿ, ಪ್ರವರ್ಗ-1 ವಿದ್ಯಾರ್ಥಿಗಳಿಂದ 2021-22ನೇ ಸಾಲಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ಊಟ ಮತ್ತು ವಸತಿ ಸಹಾಯ ಯೋಜನೆ(ವಿದ್ಯಾಸಿರಿ) ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಸಲ್ಲಿಸುವ ಅರ್ಜಿಯ ದಿನಾಂಕವನ್ನು 2022ರ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ ಎಂದು ನಂಜನಗೂಡು ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತ ವಿದ್ಯಾರ್ಥಿಗಳು ಇಲಾಖೆಯ www.ssp.postmatric.karnataka.gov.in ವೆಬ್‌ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬAಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ತಿಳಿಯಲು ಹೆಚ್ಚಿನ ಮಾಹಿತಿಗಾಗಿ www.bcwd.karnataka.gov.in ವೆಬ್‌ಸೈಟ್‌ಅನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಆಸಕ್ತ ವಿದ್ಯಾರ್ಥಿಗಳು ಮೊ.ಸಂ. 8050770005, 8050770004 ಹಾಗೂ ದೂ.ಸಂ. 080-35254757ಅನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share