15ನೇ ಹಣಕಾಸು ಆಯೋಗ ಬಂದಾಗ ನಮಗೆ ದೊಡ್ಡ ಅನ್ಯಾಯ -ಸಿ ಎಂ

259
Share

 

*15ನೇ ಹಣಕಾಸು ಆಯೋಗ ಬಂದಾಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದರು. ನಮಗೆ ದೊಡ್ಡ ಅನ್ಯಾಯ ಆಯಿತು. ನಾನು 14 ನೇ ಹಣಕಾಸು ಆಯೋಗದಲ್ಲಿ ಮುಖ್ಯಮಂತ್ರಿ ಆಗಿದ್ದೆ. ನಮಗೆ ಇಷ್ಟೊಂದು ಅನ್ಯಾಯ ಆಗಲಿಲ್ಲ.*

*ರಾಜ್ಯದ ಪಾಲಿನ ಕೇಂದ್ರದ ಪರಿಹಾರ ಜೂನ್‌ 2022 ಸ್ಥಗಿತಗೊಳಿಸಲಾಗಿದೆ*

*ಬಿಜೆಪಿಯವರು ರಾಮಾಯಣ, ಮಹಾಭಾರತ ಓದಿಯೇ ಇಲ್ಲ*

ಬೆಂಗಳೂರು ಫೆಬ್ರುವರಿ 29-
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳನ್ನು ಎಳೆ ಎಳೆಯಾಗಿ ಬಿಡಿಸಿಟ್ಟ ಮುಖ್ಯಮಂತ್ರಿಗಳು
15ನೇ ಹಣಕಾಸು ಆಯೋಗ ಬಂದಾಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದರು. ನಾನು 14 ನೇ ಹಣಕಾಸು ಆಯೋಗದಲ್ಲಿ ಮುಖ್ಯಮಂತ್ರಿ ಆಗಿದ್ದೆ. ನಮಗೆ ಇಷ್ಟೊಂದು ಅನ್ಯಾಯ ಆಗಲಿಲ್ಲ. ಪರಿಹಾರ ಜೂನ್‌ 2022 ಸ್ಥಗಿತಗೊಳಿಸಲಾಗಿದೆ. ಹಿಂದೆ ಹೆಚ್ಚುವರಿ ಅನುದಾನ ಕೊಟ್ಟಿದ್ದೇವೆಂದು ಈಬಾರಿ ಕಡಿತಗೊಳಿಸಿದ್ದಾರೆ. ಇಷ್ಟೆಲ್ಲ ಅನ್ಯಾಯವಾಗುತ್ತಿದೆ ಎಂದರೂ ಅವರು ಕೇಂದ್ರ ಸರ್ಕಾರವನ್ನು ಬೆಂಬಲಿಸುತ್ತಿದ್ದಾರಲ್ಲಾ? ನೀವು ಕನ್ನಡಿಗರಾ? ನಾಡ ದ್ರೋಹಿಗಳು ಎಂದು ಹೇಳಬೇಕಾಗುತ್ತದೆ. ಎಂದರು.

 

*ಬೆಲೆ ಏರಿಕೆ, ಸಂಕಷ್ಟಕ್ಕೆ ಗ್ಯಾರಂಟಿ ಉತ್ತರ*
ಸಬ್‌ ಕಾ ಸಾಥ್‌ ಎಂದವರು ಪೆಟ್ರೋಲ್‌ ಡೀಸೆಲ್‌ ಬೆಲೆ, ಗ್ಯಾಸ್‌ ಬೆಲೆ, ಅಗತ್ಯವಸ್ತುಗಳ ಬೆಲೆ ಏರಿಸಿದರು. ಬಡವರಿಗೆ ನಿರುದ್ಯೋಗ, ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅವರಿಗೆ ನಾವು ಗ್ಯಾರಂಟಿ ಯೋಜನೆಗಳ ಮೂಲಕ ನಾಲ್ಕವಿರ ರೂ. ಕೊಡ್ತಾ ಇದ್ದೀವಿ. 1.2 ಕೋಟಿ ರೂ. ಕುಟುಂಬಗಳು ಅಂದರೆ ಸುಮಾರು 4.5 ಕೋಟಿ ಜನರಿಗೆ ಕೊಡ್ತಾ ಇದ್ದೀವಿ.
ಈಗ ಅವರು ನಮ್ಮನ್ನು ಕಾಪಿ ಮಾಡುತ್ತಿದ್ಧಾರೆ. ಈಗ ಮೋದಿ ಗ್ಯಾರಂಟಿ ಎಂದು ಹೇಳುತ್ತಾರೆ. ಈ ಮೋದಿ ಗ್ಯಾರಂಟಿಯಲ್ಲಿ ಶೇ. 50 ರಿಂದ 60 ರಷ್ಟು ಪಾಲು ಕರ್ನಾಟಕದ್ದೂ ಇದೆ. ಇವರು ಕನ್ನಡಿಗರಿಗೆ ದ್ರೋಹ ಮಾಡುತ್ತಿಲ್ಲವೇ?
25 ಜನ ಎಂಪಿಗಳು ಗೆದ್ದು ಹೋಗಿದ್ದಾರೆ. 15ನೇ ಹಣಕಾಸು ಆಯೋಗದಲ್ಲಿ ಶಿಫಾರಸು ಮಾಡಿರುವ ಅನುದಾನ ಕೇಳಿದ್ದಾರೆಯೇ? ಅವರಿಗೆ ತಾಕತ್ತಿಲ್ಲ.
ಬರ ಪರಿಹಾರಕ್ಕೆ ಪ್ರಸ್ತಾವನೆ ಅಕ್ಟೋಬರ್‌ ನಲ್ಲಿಯೇ ಕಳಿಸಿದ್ದೆವು. ನೇರವಾಗಿ ಪ್ರಧಾನಮಂತ್ರಿಯವರು ಹಾಗೂ ಅಮಿತ್‌ ಷಾ ಅವರನ್ನು ಭೇಟಿ ಮಾಡಿದೆ. 240 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿವೆ ಎಂದು ಪರಿಹಾರ ನೀಡುವಂತೆ ಮನವಿ ಮಾಡಿದೆ. ಡಿಸೆಂಬರ್‌ 23ರಂದು ಸಭೆ ಕರೆಯುವುದಾಗಿ ಕೇಂದ್ರ ಸಚಿವರು ಹೇಳಿದರೂ ಈ ವರೆಗೆ ಸಭೆ ನಡೆಸಿಲ್ಲ. ನಾವು ತಾತ್ಕಾಲಿಕವಾಗಿ 33 ಲಕ್ಷ ರೈತರಿಗೆ ಪರಿಹಾರ ವಿತರಿಸಿದ್ದೇವೆ.
ಈ ಸಂಸದರು ಈ ಬಗ್ಗೆ ಮೌನ ವಹಿಸಿದ್ದಾರೆ. ಕರ್ನಾಟಕದ ಜನ ಇವರನ್ನು ಮುಂಬರುವ ಚುನಾವಣೆಯಲ್ಲಿ ತಿರಸ್ಕರಿಸಬೇಕು.
ಶಿಕ್ಷಣ, ಆರೋಗ್ಯ ಇಲಾಖೆ, ಕಾನೂನು ಸುವ್ಯವಸ್ಥೆ, ರಸ್ತೆಗಳಿಗೆ, ನೀರಾವರಿ, ಪಿಂಚಣಿ, ಗ್ರಾಮೀಣಾಭಿವೃದ್ಧಿ ಎಲ್ಲ ವಲಯಗಳಿಗೂ ಅನುದಾನ ಹೆಚ್ಚಾಗಿಯೇ ಕೊಟ್ಟಿದ್ದೇವೆ.
ಕೇಂದ್ರ ಸರ್ಕಾರದಿಂದ ಹಣ ಬರುತ್ತದೆ ಎಂದು ಪದೇ ಪದೇ ಹೇಳುತ್ತಾರೆ. ಈ ಹಣ ಯಾರಿಂದ ಬರುತ್ತದೆ? ನಮ್ಮ ತೆರಿಗೆಯಿಂದ. ಆದ್ದರಿಂದಲೇ ನಾವು ಹೇಳುವುದು ನಮ್ಮ ತೆರಿಗೆ ನಮ್ಮ ಹಕ್ಕು.
ಸೆಸ್‌, ಸರ್ಚಾರ್ಜ್‌ ನಲ್ಲಿ ನಮಗೆ ಪಾಲು ಕೊಡುವುದಿಲ್ಲ. ಸೆಸ್‌, ಸರ್ಚಾರ್ಜ್‌ ಮೂಲ 5,52,000 ಕೋಟಿ ರೂ. ಸಂಗ್ರಹವಾಗಿದೆ. ಸೆಸ್‌ ಸರ್ಚಾರ್ಜ್‌ 1958 ರಿಂದ ವಿಧಿಸಲಾಗುತ್ತಿದೆ ಎಂದು ಬೊಮ್ಮಾಯಿ ಅವರು ಹೇಳಿದ್ದಾರೆ. ಆದರೆ 1999 ರ ವರೆಗೆ ಸೆಸ್‌ ಸರ್ಚಾರ್ಜ್‌ ನಲ್ಲಿ ರಾಜ್ಯಕ್ಕೆ ಪಾಲು ದೊರೆಯುತ್ತಿದ್ದು. ಸಂವಿಧಾನ ತಿದ್ದುಪಡಿ ಮಾಡಿ ಇದನ್ನು ಸ್ಥಗಿತಗೊಳಿಸಲಾಯಿತು.
ಕನಿಷ್ಠ ತೆರಿಗೆಯ 50% ಆದರೂ ನಮಗೆ ಕೊಡಬೇಕು. 4.71% ರಿಂದ 3.64% ಗೆ ಕಡಿಮೆಯಾಗಿದೆ.. ಇದರ ಅರಿವಾಗಿಯೇ 15ನೇ ಹಣಕಾಸು ಆಯೋಗ ವಿಶೇಷ ಅನುದಾನಕ್ಕೆ ಶಿಫಾರಸು ಮಾಡಿದ್ದು.
ನಾವು ಸಾಲ ಮಾಡಿರುವುದು ನಿಜ. ಆದರೆ ಅದು ಜಿ.ಎಸ್.ಡಿ.ಪಿ.ಯ ಶೇ. 23.68 ರಷ್ಟಿದೆ. ಅಂದರೆ ಶೇ. 25ರ ಒಳಗೇ ಇದೆ. ವಿತ್ತೀಯ ಕೊರತೆ 2.95% ಇದೆ. ರಾಜಸ್ವ ಉಳಿತಾಯ ಇಲ್ಲ, ನಿಜ. ಆದರೆ ಕೇಂದ್ರ ಸರ್ಕಾರದ ವಿತ್ತೀಯ ಕೊರತೆ 5.1% ರಷ್ಟಿದೆ.
*ಎರಡು ವರ್ಷದಲ್ಲಿ ಉಳಿತಾಯ ಬಜೆಟ್: ಸಿಎಂ ಭರವಸೆ*
ರಾಜ್ಯ ಸರ್ಕಾರ ಒಂದೇ ಒಂದು ಬಾರಿ 2020-21 ರಲ್ಲಿ ಶೇ 3 ರ ಮಿತಿ ದಾಟಿದೆ. ಇನ್ನು ಎರಡು ವರ್ಷದಲ್ಲಿ ಆಯವ್ಯಯವನ್ನು ರಾಜಸ್ವ ಉಳಿತಾಯಕ್ಕೆ ತಂದೇ ತರುವುದಾಗಿ ಸದನಕ್ಕೆ ಭರವಸೆ ನೀಡುತ್ತೇನೆ.
2018 ರಲ್ಲಿ ನನ್ನ ಅವಧಿಯ ಮುಕ್ತಾಯದ ವೇಳೆ 2.42 ಲಕ್ಷ ಕೋಟಿ ಸಾಲ ಇದ್ದು, 2023 ಮಾರ್ಚ್‌ ವೇಳೆಗೆ 5.23 ಲಕ್ಷ ಕೋಟಿ ಇದೆ. ಇವರು ನಾಲ್ಕು ವರ್ಷದಲ್ಲಿ 2,81,00 ಕೋಟಿ ರೂ. ಮಾಡಿದ್ದಾರೆ. ಇದಲ್ಲದೇ ಜಿ.ಎಸ್.ಟಿ. ಪರಿಹಾರ ಸಾಲ 3,000 ಕೋಟಿ ರೂ. ಮಾಡಿದ್ದಾರೆ.
ಕೇಂದ್ರದಲ್ಲಿ 2013-14 ರಲ್ಲಿ 53,10,000 ಕೋಟಿ ಸಾಲ ಇತ್ತು. ಈಗ 183,67,132 ಕೋಟಿ ಸಾಲ ಇದೆ. ನರೇಂದ್ರ ಮೋದಿಯವರ ಅವಧಿಯಲ್ಲಿ 130 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ.. ದೇಶವನ್ನು ಸಾಲಗಾರರನ್ನಾಗಿ ಮಾಡಿದವರು ಯಾರು? ನರೇಂದ್ರ ಮೋದಿಜಿ, ಬಿಜೆಪಿಯವರು ಅಲ್ಲವೇ?.
ನಾವು ಬಡವರಿಗೆ, ರೈತರಿಗೆ, ಹೆಣ್ಣುಮಕ್ಕಳಿಗೆ, ಯುವಕರಿಗೆ, ಮಹಿಳೆಯರಿಗೆ, ಕಾರ್ಮಿಕರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬಿಸುವ ಕೆಲಸ ಮಾಡುತ್ತಿದ್ದೇವೆ.
ರಾಜ್ಯದ ಭೌತಿಕ ಆರೋಗ್ಯ, ಆರ್ಥಿಕ ಆರೋಗ್ಯ, ಮಾನಸಿಕ ಆರೋಗ್ಯ ಹಾಗೂ ಆಧ್ಯಾತ್ಮಿಕ ಆರೋಗ್ಯ- ಈ ನಾಲ್ಕು ಆಯಾಮಗಳಲ್ಲಿ ಕಾರ್ಯನಿರ್ವಹಿಸಲಿದ್ದೇವೆ


Share