15 ರಂದು (ನಾಳೆ) 10,15ಕ್ಕೆ ದಸರಾ ಮಹೋತ್ಸವ ಉದ್ಘಾಟನೆ

39
Share

* ದಸರಾ ಮಹೋತ್ಸವ 2023 ರ ಉದ್ಘಾಟನೆಯನ್ನು ನಾದಬ್ರಹ್ಮ ಡಾ.ಹಂಸಲೇಖ ಅವರು ಚಾಮುಂಡಿ ದೇವಿಯ ಅಗ್ರ ಪೂಜೆಯೊಂದಿಗೆ ದಿನಾಂಕ 15-10-2023ರಂದು ಬೆಳಿಗ್ಗೆ 10.15 ರಿಂದ 10.36 ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನ ದಲ್ಲಿ ನೆರವೇರಿಸಲಿದ್ದಾರೆ .

ಕಾರ್ಯಕ್ರಮದ ಘನ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್, ಕೇಂದ್ರ ವಿತ್ತ ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲ ಸೀತಾರಾಮನ್, ಮಾನ್ಯ ಕೇಂದ್ರ ಸಂಸದೀಯ ವ್ಯವಹಾರಗಳು ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಶ್ರೀ ಪ್ರಹ್ಲಾದ ಜೋಶಿ, ಕೌಶಲಾಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವರಾದ ರಾಜ ಚಂದ್ರಶೇಖರ್, ಕೃಷಿ ಹಾಗೂ ರೈತ ಕಲ್ಯಾಣ ಖಾತೆ ಸಚಿವರಾದ ಶೋಭಾ ಕರಂದ್ಲಾಜೆ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾದ ಎ ನಾರಾಯಣಸ್ವಾಮಿ, ರಾಸಾಯನಿಕ ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವರಾದ ಭಗವಂತ ಖೂಬಾ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಜಿ.ಟಿ ದೇವೇಗೌಡ ವಹಿಸಲಿದ್ದು, ಸಮಾರಂಭದ ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ ಪಾಟೀಲ್, ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ, ಇಂಧನ ಸಚಿವರಾದ ಕೆ.ಜೆ ಜಾರ್ಜ್, ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್ ಸುರೇಶ್ ಹಾಗೂ ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಶಿವಕುಮಾರ್ ಭಾಗವಹಿಸಲಿದ್ದಾರೆ.

ಕುಸ್ತಿ ಪಂದ್ಯಾವಳಿ
ನಗರದ ಜಿಲ್ಲಾ ಪೊಲೀಸ್ ಸಭಾಂಗಣದಲ್ಲಿ ದಸರಾ ಕುಸ್ತಿ ಉಪಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ದಸರಾ ಮಹೋತ್ಸವದ ಇತಿಹಾಸದಲ್ಲಿ ಕುಸ್ತಿಯು ಪಾರಂಪರಗತವಾಗಿ ನಡೆದುಕೊಂಡು ಬಂದಿದ್ದು, ಅಂತೆಯೇ ಈ ಬಾರಿಯ ಕುಸ್ತಿ ಪಂದ್ಯಾವಳಿಗಳನ್ನು ಅಕ್ಟೋಬರ್ 15 ರಿಂದ ಅಕ್ಟೋಬರ್ 21 ರವರೆಗೆ ಡಿ.ದೇವರಾಜ ಅರಸು ವಿವಿದ್ಯೋದ್ದೇಶ ಕ್ರೀಡಾಂಗಣ ಮೈದಾನದಲ್ಲಿ ನಡೆಸಲಾಗುವುದು .
*ಅ. 15 ರಂದು ದಸರಾ ವಸ್ತು ಪ್ರದರ್ಶನ ಉದ್ಘಾಟನಾ ಸಮಾರಂಭ*
ಮೈಸೂರು,- ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ವತಿಯಿಂದ ದಸರಾ ವಸ್ತು ಪ್ರದರ್ಶನ-2023 ಉದ್ಘಾಟನಾ ಸಮಾರಂಭವನ್ನು ಅ. 15 ರಂದು ಸಂಜೆ 4:30 ಕ್ಕೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.
ಅ.15 ರಂದು ಸಂಜೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ
ಮೈಸೂರು, ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವನ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅ.15 ರಂದು ಸಂಜೆ 7:00 ಗಂಟೆಗೆ ಅರಮನೆ ಆವರಣ ದಲ್ಲಿ ಹಮ್ಮಿಕೊಳ್ಳಲಾಗಿದೆ.
ಉದ್ಘಾಟನೆಯನ್ನು ಗೌರವಾನ್ವಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಲಿದ್ದಾರೆ. ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ಉಪ ಮುಖ್ಯಮಂತ್ರಿಗಳಾದ ಡಿ. ಕೆ ಶಿವಕುಮಾರ್ ಅವರು ವಹಿಸಲಿದ್ದಾರೆ.
 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷ್ಣರಾಜ ಕ್ಷೇತ್ರದ ಶಾಸಕರಾದ ಶ್ರೀವತ್ಸ ಅವರು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕದ ಸಚಿವರು ಗಣ್ಯರು ಭಾಗವಹಿಸಲಿದ್ದಾರೆ.
ಹಾಗೂ ಮೈಸೂರು ದಸರಾ ಮಹೋತ್ಸವ 2023ರ ದಿನಾಂಕ:24-10-2023 ರಂದು ಮಂಗಳವಾರ ಮಧ್ಯಾಹ್ನ 1.46 ರಿಂದ 2.08 ಗಂಟೆಯವರೆಗೆ ಅರಮನೆ ಬಲರಾಮ ದ್ವಾರದಲ್ಲಿ ನಂದಿಧ್ವಜ ಪೂಜೆ ಹಾಗೂ ಸಂಜೆ 4.40 ರಿಂದ 5.00 ರವರೆಗೆ‌ ಅರಮನೆ ಆವರಣದಲ್ಲಿ ವಿಜಯದಶಮಿ ಮೆರವಣಿಗೆ ಕಾರ್ಯಕ್ರಮ ನಡೆಯಲಿದೆ
ಈ ಕಾರ್ಯಕ್ರಮಗಳು ಫೇಸ್‌ಬುಕ್ ಯೂಟ್ಯೂಬ್ ನತ್ತು ವೆಬ್‌ಸೈಟ್ ‌ನಲ್ಲಿ ದಿನಾಂಕ: 15-10-2023 ರಿಂದ 24-10-2023 ರವರಗೆ ನೇರ ಪ್ರವಾಸವಾಗಲಿದೆ.*

ಈ ಕಾರ್ಯಕ್ರಮಗಳನ್ನು ವರ್ಚುವಲ್ ಆಗಿ ವೀಕ್ಷಿಸಲು ಈ ಲಿಂಕ್ ಗಳನ್ನು ಬಳಸಿ.

Facebook Link.
https://facebook.mysoredasara.gov.in

YouTube Link
https://youtube.mysoredasara.gov.in

Website Link
https://mysoredasara.gov.in/

ದಸರಾ ಕಾರ್ಯಕ್ರಮಗಳನ್ನು ವರ್ಚುವಲ್ ಆಗಿ ವೀಕ್ಷಿಸಲು ಈ ಲಿಂಕ್ ಬಳಸಬಹುದು.

*ತಾವೂ ವೀಕ್ಷಿಸಿ, ಸ್ನೇಹಿತರಿಗೂ ಶೇರ್ ಮಾಡಿ.*

 


Share