164 ಹಳ್ಳಿಗಳಿಗೆ ಕುಡಿಯುವ ನೀರುನ ಯೋಜನೆ ಪ್ರಗತಿಯಲ್ಲಿ

15
Share

 

*ಕೇಂದ್ರ ಪುರಸ್ಕೃತ ಯೋಜನೆಗಳ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಿ* –
*ಕುಡಿಯುವ ನೀರಿನ ಕೊರತೆ ಆಗದಂತೆ ಕ್ರಮವಹಿಸಿ* –

-*ಪ್ರತಾಪ್ ಸಿಂಹ*

ಮೈಸೂರು ನವೆಂಬರ್ 28 (ಕರ್ನಾಟಕ ವಾರ್ತೆ) ಕೇಂದ್ರ ಸರ್ಕಾರವು ಹಲವು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಸೌಲಭಗಳು ಅರ್ಹರಿಗೆ ತಲುಪಬೇಕು. ಕುಡಿಯುವ ನೀರಿನ ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಂಡು ಕುಡಿಯುವ ನೀರನ್ನು ಒದಗಿಸಬೇಕು ಎಂದು ಮೈಸೂರು ಕೊಡಗು ಲೋಕಸಭಾ ಸಂಸದರಾದ ಪ್ರತಾಪ್ ಸಿಂಹ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ (ದಿಶಾ ಸಮಿತಿ ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹುಣಸೂರಿನಲ್ಲಿ ನಿರ್ಮಾಣ ಆಗಿರುವ ಹೊಸ ಸರ್ಕಾರಿ ಆಸ್ಪತ್ರೆಗೆ ಮೂಲ ಸೌಕರ್ಯಗಳನ್ನು ಒದಗಿಸಿ ಆಸ್ಪತ್ರೆಯನ್ನು ಶಿಪ್ಟ್ ಮಾಡಿಸಿ ಎಂದರು.

ಮೈಸೂರು ವಿಭಾಗದ ವ್ಯಾಪ್ತಿಯಲ್ಲಿ 900 ಭ್ರೂಣ ಹತ್ಯೆಗಳು ಆಗಿರುವ ಕುರಿತು ಪ್ರಸ್ತಾಪಿಸಿದ ಅವರು, ಈ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ಯಾಕೆ ಇರಲಿಲ್ಲ. ಕೆ ಪಿ ಎಂ ಇ ಆಕ್ಟ್ ಅಡಿ ಸ್ಕ್ಯಾನಿಂಗ್ ಸೆಂಟರ್ ಗಳು ಅನುಮತಿ ಪಡೆದಿರಬೇಕು. ಈ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಮೈಸೂರು ನಗರದಲ್ಲಿ ಅನಧಿಕೃತ ಫ್ಲೆಕ್ಸ್ ಬ್ಯಾನರ್ ಗಳನ್ನು ತೆರವು ಮಾಡಬೇಕು. ಅನುಮತಿ ಪಡೆಯದೆ ಫ್ಲೆಕ್ಸ್, ಬ್ಯಾನರ್ ಹಾಕುವವರಿಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಿ ಎಂದರು.

ಕೆ ಆರ್ ಅಸ್ಪತ್ರೆ ಆವರಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಮೈಸೂರು ವೈದ್ಯಕೀಯ ಕಾಲೇಜು ಜುಲೈ, 2024 ಕ್ಕೇ 100 ವರ್ಷಗಳು ತುಂಬುತ್ತಿದೆ. ಶತಮಾನೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಮೈಸೂರು ಮೆಡಿಕಲ್ ಕಾಲೇಜಿನ ನಿರ್ದೇಶಕರಿಗೆ ಸೂಚನೆ ನೀಡಿದರು. ಹುಂಡುವಾಡಿ ಯೋಜನೆಯಡಿ 164 ಹಳ್ಳಿಗಳಿಗೆ ಕುಡಿಯುವ ನೀರನ್ನು ಒದಗಿಸುವ ಯೋಜನೆ ಕಾಮಗಾರಿ ಪ್ರಗತಿಯಲ್ಲಿದೆ. ಹಾಡ್ಯದಿಂದ ಬೆಟ್ಟದಪುರ ಬಾಗದ 303 ಹಳ್ಳಿಗಳಿಗೆ ಕುಡಿಯುವ ನೀರನ್ನು ಒದಗಿಸುವ ಯೋಜನೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

ಮೈಸೂರು ಸ್ವಚ್ಚ ನಗರಿ ಎಂದು ಹೆಸರಾಗಿದ್ದು, ಇದನ್ನು ಕಾಪಾಡಿಕೊಳ್ಳಬೇಕು. ಸ್ಲಂ ಬೋರ್ಡ್ ವತಿಯಿಂದ ಅಲರ್ಟ್ ಆಗಿರುವವರು ಅಲ್ಲಿಗೆ ಶಿಫ್ಟ್ ಆಗಬೇಕು. ಕೆಲವರು ಸ್ಲಂ ಬೋರ್ಡ್ ವತಿಯಿಂದ ನಿರ್ಮಿಸಿರುವ ಮನೆಗಳಲ್ಲಿ ಕೆಲವರು ಅನಧಿಕೃತವಾಗಿ ಇದ್ದಾರೆ. ಕೆಲವರು ಮನೆ ಬಾಡಿಗೆ ನೀಡಿದ್ದಾರೆ ಈ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿ ಅರ್ಹರಿಗೆ ಸೌಲಭ್ಯ ಒದಗಿಸುವಂತೆ ಸ್ಲಂ ಬೋರ್ಡ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನರಸಿಂಹರಾಜ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 21 ಸಾವಿರ ಮನೆಗಳ ನಲ್ಲಿಗಳಿಗೆ ಮೀಟರ್ ಅಳವಡಿಕೆ ಮಾಡಿಲ್ಲ. ಇದರಿಂದ ಮಹಾನಗರ ಪಾಲಿಕೆಗೆ ಬರಬೇಕಾದ ಆದಾಯ ವ್ಯರ್ಥವಾಗುತ್ತಿದೆ. ವಾಣಿ ವಿಲಾಸ ನೀರು ಸರಬರಾಜು ವತಿಯಿಂದ ಮೀಟರ್ ಅಳವಡಿಕೆ ಮಾಡುವಂತೆ ಸೂಚನೆ ನೀಡಿದರು. ಈ ಬಾರಿ ಮುಂಗಾರು ಮತ್ತು ಹಿಂಗಾರು ಮಳೆ ಕೊರತೆ ಆಗಿದೆ. ಪೂರ್ಣ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ರೈತರಿಗೆ ಬರ ಪರಿಹಾರವನ್ನು ಆದಷ್ಟು ಬೇಗ ನೀಡಬೇಕು. ಮೈಸೂರು ವಿಳೆದೆಳೆ, ಮೈಸೂರು ಮಲ್ಲಿಗೆ ಮತ್ತು ನಂಜನಗೂಡು ರಸಬಾಳೆ ಗೆ ಜಿಯೋ ಟ್ಯಾಗ್ ದೊರೆತಿದೆ. ಇದನ್ನು ರೀನಿವಲ್ ಮಾಡಿಸಬೇಕು. ಇವುಗಳನ್ನು ಹೆಚ್ಚು ಪ್ರಚಾರ ಮಾಡಿ ಬೇಡಿಕೆ ಹೆಚ್ಚುವಂತೆ ಮಾಡಬೇಕು ಎಂದು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಹುಣಸೂರಿನ ಧರ್ಮಪುರ ಹಾಗೂ ಹಿರಿಕ್ಯಾತನಹಳ್ಳಿಯಲ್ಲಿ ಸ್ಟೇಟ್ ಬ್ಯಾಂಕ್ ಇಂಡಿಯಾದ ಬ್ರಾಂಚ್ ಗಳನ್ನು ತೆರೆಯಬೇಕು. ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಉತ್ತಮ ಸ್ಥಾನ ಬರಬೇಕು. ಈ ನಿಟ್ಟಿನಲ್ಲಿ ಉತ್ತಮ ಬೋಧನೆ ನೀಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಮಾತನಾಡಿ ಆಯುಷ್ಮನ್ ಆರೋಗ್ಯ ಕರ್ನಾಟಕ ಕಾರ್ಡ್ ಗಳನ್ನು ಇಲ್ಲಿಯವರೆಗೆ 25 ಲಕ್ಷ ಕಾರ್ಡ್ ವಿತರಣೆ ಮಾಡಬೇಕಿತ್ತು ಆದರೆ 7.6 ಲಕ್ಷ ಕಾರ್ಡ್ ವಿತರಣೆ ಮಾಡಲಾಗಿದೆ. ನಿಗದಿತ ಗುರಿ ತಲುಪಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಗ್ರಾಮ ಒನ್ ಕೇಂದ್ರಗಳು, ಆರೋಗ್ಯ ಕೇಂದ್ರಗಳಲ್ಲಿ ವಿತರಣೆ ಮಾಡಲಾಗುತ್ತಿದೆ. ಆರೋಗ್ಯ ಮಿತ್ರರನ್ನು ಆಸ್ಪತ್ರೆಗಳಿಗೆ ನೀಡಲಾಗಿದೆ. ಸ್ಕ್ಯಾನಿಂಗ್ ಸೆಂಟರ್ ಗಳು ಕಡ್ಡಾಯವಾಗಿ ಭ್ರೂಣ ಲಿಂಗ ಪತ್ತೆ ಮಾಡುವುದಿಲ್ಲ ಎಂಬ ಮುಚ್ಚಳಿಕೆ ನೀಡಿರಬೇಕು. ಈಗಾಗಲೇ ಭ್ರೂಣ ಹತ್ಯೆ ನಡೆದಿರುವ ಸ್ಕ್ಯಾನಿಂಗ್ ಸೆಂಟರ್ ಕಟ್ಟಡದ ಮಾಲೀಕರು ಹೊಣೆಗಾರರಾಗುತ್ತಾರೆ. ಈಗಾಗಲೇ ಈ ಬಗ್ಗೆ ತನಿಖೆ ನಡೆಯುತ್ತಿದೆ. ನಿಗದಿತ ವಿದ್ಯಾರ್ಹತೆ ಇಲ್ಲದವರು ಅಲೋಪಥಿ ಮೆಡಿಷಿನ್ ಹಾಗೂ ಇಂಗ್ಲೀಷ್ ಮೆಡಿಷಿನ್ ನೀಡುವುದು ಕಂಡುಬಂದರೆ ಶಿಸ್ತು ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನೋಟಿಫೈ ಆಗದೆ ಇರುವ ಹಲವು ಕೊಳಗೇರಿಗಳು ಇದ್ದು ಇದನ್ನು ಸರ್ವೇ ಮಾಡಿ. ಇವರಿಗೆ ಸ್ಲಂ ಬೋರ್ಡ್ ವತಿಯಿಂದ ಮನೆಗಳನ್ನು ನಿರ್ಮಾಣ ಮಾಡಿ ನೀಡುವ ವ್ಯವಸ್ಥೆ ಮಾಡಲಾಗುವುದು. ಬರ ಪರಿಹಾರವನ್ನು ನೀಡಲು 69 ಕೋಟಿ ಪರಿಹಾರವನ್ನು ನೀಡುವಂತೆ ವರದಿ ಸಲ್ಲಿಸಲಾಗಿದೆ. ಸರ್ಕಾರದಿಂದ 20 ಕೋಟಿ ಅನುಧಾನ ನೀಡಲಾಗಿದೆ. ಬೆಳೆ ಹಾನಿಯನ್ನು ರೈತರು ಫ್ರೂಟ್ ಐಡಿ ಯಲ್ಲಿ ನೋಂದಣಿ ಮಾಡಬೇಕು. ನೋಂದಣಿ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಪೌಸ್ಟಿಕತೆ ಕೇಂದ್ರಗಳನ್ನು ತೆರೆದು ಪೌಸ್ಟಿಕ ಆಹಾರವನ್ನು ನೀಡಬೇಕು. ಪ್ರತಿ ತಾಲ್ಲೂಕಿನ ಆಸ್ಪತ್ರೆಗಳಲ್ಲಿ ಅಪೌಸ್ಟಿಕ ಮಕ್ಕಳಿಗೆ ಬೆಡ್ ಗಳನ್ನು ಮೀಸಲು ಇಟ್ಟು ಚಿಕತ್ಸೆ ನೀಡಬೇಕು. ಎಸ್ ಎಸ್ ಎಲ್ ಸಿ ಫಲಿತಾಂಶ ಉತ್ತಮವಾಗಿ ಬರಲು ಅಗತ್ಯ ಸಿದ್ಧತೆಗಳನ್ನು ಮಾಡಬೇಕು. ಅನುತೀರ್ಣ ಆಗುವ ಸಂಭವ ಇರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ವಿಶೇಷ ಬೋಧನೆ ಮಾಡಬೇಕು ಎಂದು ಡಿ ಡಿ ಪಿ ಐ ಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ ಎಂ ಗಾಯತ್ರಿ ಅವರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


Share