2020” ಸಾಧನೆಗಳ ಕಿರುಹೊತ್ತಿಗೆ ಬಿಡುಗಡೆಗೊಳಿಸಿದ ಸಿಎಂ

391
Share

ಸಹಕಾರದ ಪ್ರಗತಿ – 2020” ಸಾಧನೆಗಳ ಕಿರುಹೊತ್ತಿಗೆ ಬಿಡುಗಡೆಗೊಳಿಸಿದ ಸಿಎಂ

  • ಮುಂದಿನ ವರ್ಷ 30 ಲಕ್ಷ ರೈತರಿಗೆ 20 ಸಾವಿರ ಕೋಟಿ ರೂಪಾಯಿ ಕೃಷಿ ಸಾಲ ನೀಡಲು ಸಿದ್ಧತೆಗೆ ಸೂಚನೆ
  • ಈ ವರ್ಷದ ಕೃಷಿ ಸಾಲ ವಿತರಣೆಯಲ್ಲಿ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಮುಖ್ಯಮಂತ್ರಿಗಳ ಸೂಚನೆ
  • ಸೋಮಶೇಖರ್ ಕಾರ್ಯವೈಖರಿ ಬಗ್ಗೆ ಹೆಮ್ಮೆ ಇದೆ ಎಂದ ಸಚಿವರಾದ ಅಶೋಕ್

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಸಹಕಾರ ಇಲಾಖೆ ವತಿಯಿಂದ “ಸಹಕಾರದ ಪ್ರಗತಿ – 2020” ಸಾಧನೆಗಳ ಕಿರುಹೊತ್ತಿಗೆಯನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಯುತ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ನಿವಾಸ ಕಾವೇರಿಯಲ್ಲಿ ಭಾನುವಾರ ಬಿಡುಗಡೆಗೊಳಿಸಿದರು.

ಮುಂದಿನ ವರ್ಷಕ್ಕೆ 20 ಸಾವಿರ ಕೋಟಿ ರೂ. ಕೃಷಿ ಸಾಲ ಗುರಿ

ಮುಂದಿನ ವರ್ಷದ ಗುರಿ 30 ಲಕ್ಷ ರೈತರಿಗೆ 20 ಸಾವಿರ ಕೋಟಿ ರೂಪಾಯಿ ಕೃಷಿ ಸಾಲವನ್ನು ವಿತರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರಿಗೆ ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸೂಚಿಸಿದರು.

ರೈತರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ

ಪ್ರಸಕ್ತ ಸಾಲಿನಲ್ಲಿ ರೈತರಿಗೆ 14500 ಕೋಟಿ ರೂಪಾಯಿ ಕೃಷಿ ಸಾಲ ನೀಡುವ ಗುರಿ ಇದೆ. ಈಗಾಗಲೇ 8,50,000 ರೈತರಿಗೆ ರೂ.5,600 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ರೈತರಿಗೆ ಕೃಷಿ ಚಟುವಟಿಕೆಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳಾದ ಅಶ್ವಥ್ ನಾರಾಯಣ್, ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ, ಕಂದಾಯ ಸಚಿವರಾದ ಆರ್. ಅಶೋಕ್ ಅವರು ಉಪಸ್ಥಿತರಿದ್ದರು.

+++++

ಮುಖ್ಯಮಂತ್ರಿಗಳಿಂದ ಶ್ಲಾಘನೆ

ಮುಖ್ಯಮಂತ್ರಿಗಳ ಒಂದು ವರ್ಷದ ಸಾಧನೆ ಜೊತೆಗೆ ನಾನು ನಮ್ಮ ಸಹಕಾರ ಇಲಾಖೆಯಿಂದ 3 ತಿಂಗಳ ಅವಧಿಗೆ ಏನು ಸಾಧನೆ ಮಾಡಿದ್ದೇನೆ ಎಂಬುದರ ಕಿರುಹೊತ್ತಿಗೆಯನ್ನು ಹೊರತಂದಿದ್ದು, ಅದನ್ನು ಮುಖ್ಯಮಂತ್ರಿಗಳು ಬಿಡುಗಡೆಗೊಳಿಸಿದ್ದಾರೆ. ಅಲ್ಲದೆ, ಸಚಿವನಾಗಿ ನಾನು ನಿರ್ವಹಿಸಿದ ಜವಾಬ್ದಾರಿ ಬಗ್ಗೆ ಮುಖ್ಯಮಂತ್ರಿಗಳು ಮೆಚ್ಚುಗೆ ಸೂಚಿಸಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಸುದ್ದಿಗಾರರಿಗೆ ತಿಳಿಸಿದರು.

ನನ್ನ ಕಾರ್ಯವೈಖರಿ ಬಗ್ಗೆ ಸಹ ಮಾನ್ಯ ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಮುಂದೂ ಸಹ ಇದೇ ಮಾದರಿಯಲ್ಲಿ ಕಾರ್ಯನಿರ್ವಹಣೆ ಮಾಡಿ ಎಂದು ಮುಖ್ಯಮಂತ್ರಿಗಳು ಸಲಹೆ ಹಾಗೂ ಮಾರ್ಗದರ್ಶನ ಮಾಡಿದ್ದಾರೆ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.

ನಾನು ಈಗಾಗಲೇ 25 ಜಿಲ್ಲೆಗಳಿಗೆ ಭೇಟಿ ನೀಡಿ ಸ್ಥಿತಿಗತಿಗಳನ್ನು ಅರಿತಿದ್ದೇನೆ. ಪ್ರತಿ ಭೇಟಿ ವೇಳೆಯೂ ರೈತರ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಪ್ರಸಕ್ತ ಬಾರಿ ರೈತರಿಗೆ ಮಧ್ಯಮಾವಧಿ, ಅಲ್ಪಾವಧಿ ಹಾಗೂ ದೀರ್ಘಾವಧಿ ಕೃಷಿ ಸಾಲವಾಗಿ 14500 ಕೋಟಿ ರೂಪಾಯಿ ಸಾಲ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಚಾಲನೆ ನೀಡಲಾಗಿದ್ದು, ಈಗಾಗಲೇ 8,50,000 ರೈತರಿಗೆ ರೂ.5,600 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

ಕೋವಿಡ್ 19 ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ಎಪಿಎಂಸಿ ಹಾಗೂ ಸಹಕಾರ ಇಲಾಖೆ ವತಿಯಿಂದ 53 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿ ವಿತರಣೆ ಮಾಡಿದ್ದೇವೆ ಎಂದು ತಿಳಿಸಿದರು.

ಎಪಿಎಂಸಿ ಕಾಯ್ದೆ ತಿದ್ದಪಡಿಯಾದ ನಂತರ ಶೇಕಡಾ 1 ಕ್ಕೆ ಸೆಸ್ ಇಳಿಸಲಾಗಿತ್ತು. ಬಳಿಕ ಇನ್ನೂ ಇಳಿಕೆ ಮಾಡುವ ಸಂಬಂಧ ಕೂಗು ಕೇಳಿಬಂದಿದ್ದರಿಂದ ಸಂಪುಟ ಸಭೆಯಲ್ಲಿ ಚರ್ಚಿಸಿ ಶೇ. 35ಕ್ಕೆ ಸೆಸ್ ಇಳಿಕೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

ಕೊರೋನಾ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ಯಕರ್ತೆಯರಿಗೆ ತಲಾ 3 ಸಾವಿರ ರೂಪಾಯಿಯಂತೆ 12.75 ಕೋಟಿ ರೂಪಾಯಿಯನ್ನು ಇಲಾಖೆ ವತಿಯಿಂದ ನೀಡಲಾಗುತ್ತಿದ್ದು, ಈಗಾಗಲೇ 32 ಸಾವಿರ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ನೀಡಲಾಗಿದೆ. ಉಳಿದ 10 ಸಾವಿರ ಆಶಾ ಕಾರ್ಯಕರ್ತೆಯರಿಗೆ ಶೀಘ್ರದಲ್ಲಿಯೇ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಮುಖ್ಯಮಂತ್ರಿಗಳಿಂದ ಸವಾಲಿನ ಜೊತೆಯಲ್ಲೇ ಉತ್ತಮ ಆಡಳಿತ

ಮುಖ್ಯಮಂತ್ರಿಗಳು ಸವಾಲಿನ ಜೊತೆಯಲ್ಲೇ ಬಂದವರಾಗಿದ್ದಾರೆ. ಪ್ರವಾಹದಂತಹ ಸಂದರ್ಭದಲ್ಲಿ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಾವೆಲ್ಲರೂ ಅವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.

+++++

ಮುಖ್ಯಮಂತ್ರಿಗಳಿಂದ ಉತ್ತಮ ಕಾರ್ಯ

ಯಡಿಯೂರಪ್ಪ ಅವರು ಯಾವಾಗ ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡಾಗಲೆಲ್ಲ ಸವಾಲುಗಳೇ ಬರುತ್ತವೆ. ಪ್ರವಾಹ ಸಂದರ್ಭದಲ್ಲಿ ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಕೊಳ್ಳಲು 5 ಲಕ್ಷ ರೂಪಾಯಿಯನ್ನು ನಮ್ಮ ಸರ್ಕಾರ ಕೊಟ್ಟಿದೆ. ಜೊತೆಗೆ ಕಾರ್ಮಿಕರಿಗೆ, ಬಡವರಿಗೆ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡಿದ್ದಾರೆ ಎಂದು ಕಂದಾಯ ಸಚಿವರಾದ ಆರ್. ಅಶೋಕ್ ತಿಳಿಸಿದರು.

ಸಚಿವರಾದ ಸೋಮಶೇಖರ್ ಕಾರ್ಯವೈಖರಿಗೆ ಬಗ್ಗೆ ಹೆಮ್ಮೆ ಇದೆ

ಸಹಕಾರ ಸಚಿವರಾದ ಸೋಮಶೇಖರ್ ಅವರು ಚಟುವಟಿಕೆಯಿಂದ ಅನುಭವಿ ಮಂತ್ರಿಗಳಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಕಾರ್ಯಚಟುವಟಿಕೆ ಬಗ್ಗೆ ನನಗೆ ಖುಷಿ ಹಾಗೂ ಹೆಮ್ಮೆ ಇದೆ ಎಂದು ಸಚಿವರಾದ ಅಶೋಕ್ ತಿಳಿಸಿದರು.


Share