23/03/2022 ರ ಸರ್ಕಾರಿ ಅರಜಿ ಆಹ್ವಾನ

259
Share

*ವಾಲ್ಮೀಕಿ ನಿಗಮ: ವಸತಿಗಾಗಿ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ*
ಮೈಸೂರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ವಸತಿ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ್ದ ಅವಧಿಯನ್ನು 2022ರ ಮಾರ್ಚ್ 31ರ ವರೆಗೆ ವಿಸ್ತರಿಸಲಾಗಿದೆ.
2021-22 ನೇ ಸಾಲಿಗೆ ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳಿಗೆ ದೌರ್ಜನ್ಯ ಸಂತ್ರಸ್ಥರಿಗೆ, ದೇವದಾಸಿಯರಿಗೆ ಅಂತರ್ಜಾತಿ ವಿವಾಹಿತ ದಂಪತಿಗಳಿಗೆ, ವಿಧವೆಯರು, ಒಂಟಿ ಮಹಿಳೆಯರು, ಮೀನುಗಾರರಿಗೆ ವಸತಿ ರಹಿತ ನಿವೇಶನ ಹೊಂದಿದ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿಕೊಡಲು ವಸತಿ ನಿರ್ಮಾಣ ಯೋಜನೆಯಡಿಯಲ್ಲಿ ಅರ್ಜಿಯನ್ನು ಮಾರ್ಚ್ 15ರ ವರೆಗೆ ಅವಕಾಶ ನೀಡಲಾಗಿತ್ತು.
ಹೆಚ್ಚಿನ ಮಾಹಿತಿಗಾಗಿ ನಿಗಮದ www.karnataka.gov.in/kmvstdcl ವೆಬ್‌ಸೈಟ್, ದೂ. ಸಂ. 0821 -2430022 ಅಥವಾ ವಿಜಯನಗರ 2ನೇ ಹಂತ, ನಂ.40, ಮಹರ್ಷಿ ವಾಲ್ಮೀಕಿ ಭವನ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಇಲ್ಲಿ ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share