23/03/2022 ರ ಸರ್ಕಾರಿ ಅರ್ಜಿ ಆಹ್ವಾನ

288
Share

ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಆಹ್ವಾನ
ಮೈಸೂರು, ಮಾರ್ಚ್ 18 (ಕರ್ನಾಟಕ ವಾರ್ತೆ):- ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ 2021-22ನೇ ಸಾಲಿನ “ಜೀವಜಲ” ಯೋಜನೆಯಡಿ ಲಿಂಗಾಯತ ಸಮುದಾಯದ ಪ್ರವರ್ಗ-3ಬಿಗೆ ಒಳಪಡುವ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿದಾರರು ಕನಿಷ್ಠ 2 ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿದ್ದು, ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಹಾಗೂ ಅತಿ ಸಣ್ಣ ರೈತರಾಗಿದ್ದು, ವಾರ್ಷಿಕ ವರಮಾನ 40,000ರೂ.ಗಳ ಮಿತಿಯಲ್ಲಿರಬೇಕು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು.
“ಜೀವಜಲ” ಯೋಜನೆಯ ಸೌಲಭ್ಯವನ್ನು ಪಡೆಯಲು ಇಚ್ಛಿಸುವ ಲಿಂಗಾಯತ ಸಮುದಾಯದ ಫಲಾಪೇಕ್ಷಿಗಳು ಹೆಚ್ಚಿನ ಮಾಹಿತಿಗಾಗಿ ನಿಗಮದ  www.dbcdc.karnataka.gov.in  ವೆಬ್‌ಸೈಟ್‌ಅನ್ನು ಸಂಪರ್ಕಿಸಬಹುದು ಅಥವಾ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ಕೇಂದ್ರ ಕಛೇರಿಯ ದೂ.ಸಂ. 080-22865522 ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಗಮದ ಕಛೇರಿಯ ದೂರವಾಣಿ ಸಂಖ್ಯೆ: 0821-2341194 ಸಂಪರ್ಕಿಸಬಹುದು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯ
ಮೈಸೂರು, ಮಾರ್ಚ್ 18 (ಕರ್ನಾಟಕ ವಾರ್ತೆ):- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ 66/11 ಕೆ.ವಿ. ಸೌತ್ (ದಕ್ಷಿಣ) ವಿದ್ಯುತ್ ವಿತರಣಾ ಕೇಂದ್ರಗಳಿAದ ಹೊರಹೊಮ್ಮುವ 11 ಕೆ.ವಿ. ವಿದ್ಯಾರಣ್ಯಪುರಂ, ಇಂಡಸ್ಟಿçÃಯಲ್, ಜೆ.ಪಿ ನಗರ, ಜ್ವಾಲಾಮುಖಿ ಎನ್.ಜೆ.ವೈ ಮತ್ತು ಹಡಜನ ಐ.ಪಿ ಫೀಡರ್‌ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು 2022ರ ಮಾರ್ಚ್ 19 ರಂದು ಹಮ್ಮಿಕೊಳ್ಳಲಾಗಿದೆ.
ಈ ಹಿನ್ನಲೆಯಲ್ಲಿ ವಿಶ್ವೇಶ್ವರನಗರ, ಇಂಡಸ್ಟಿçÃಯಲ್ ಸಬರ್ಬ್, ವಿದ್ಯಾರಣ್ಯಪುರಂ, ಬಂಡಿಪಾಳ್ಯ, ಉತ್ತನಹಳ್ಳಿ, ಹೊಸಹುಂಡಿ, ಗುಡುಮಾದನಹಳ್ಳಿ, ರಿಂಗ್ ರೋಡ್, ಎ.ಪಿ.ಎಂ.ಸಿ, ನಂಜನಗೂಡು ರಸ್ತೆ, ದೇವರಾಜ ಅರಸು ಕಾಲೋನಿ, ಧರ್ಮಸಿಂಗ್ ಕಾಲೋನಿ, ಸ್ಟರ್ಲಿಂಗ್ ಥಿಯೇಟರ್ ಸುತ್ತ-ಮುತ್ತ, ವೀರ‍್ಸ್ ಕಾಲೋನಿ, ಜೆ.ಪಿ ನಗರ, ನಾಚನಹಳ್ಳಿ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ನ.ರಾ.ಮೊಹಲ್ಲಾದ ಕಾರ್ಯಪಾಲಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ಉಚಿತ ತರಬೇತಿ ಶಿಬಿರ
ಮೈಸೂರು, ಮಾರ್ಚ್ 18 (ಕರ್ನಾಟಕ ವಾರ್ತೆ):- ಜ್ಞಾನಬುತ್ತಿ ಸಂಸ್ಥೆಯ ವತಿಯಿಂದ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿ ಶಿಬಿರವನ್ನು ಆಯೋಜಿಸಿದ್ದು, 2022ರ ಮಾರ್ಚ್ 21 ರಿಂದ 50 ದಿನಗಳವರೆಗೆ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಆವರಣದಲ್ಲಿ ತರಬೇತಿ ಶಿಬರವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಗ್ಮಿ ಪ್ರೊ.ಎಂ.ಕೃಷ್ಣೇಗೌಡ ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು 2020ನೇ ಬ್ಯಾಚಿನ ಐಎಎಸ್ ಅಧಿಕಾರಿ ಲವೀಶ್ ಒರಡಿಯಾ ಅವರು ಉದ್ಘಾಟಿಸುವರು. ಕೆ.ಎ.ಎಸ್ ಪರೀಕ್ಷೆಯಲ್ಲಿ FRIST RANK    ಗಳಿಸಿ ಪ್ರಸ್ತುತ ಮಂಡ್ಯ ಉಪ ವಿಭಾಗಾಧಿಕಾರಿಯಾಗಿರುವ ಆರ್.ಐಶ್ವರ್ಯ ಅವರು ಐಎಎಸ್ / ಕೆಎಎಸ್ ಪರೀಕ್ಷೆಗಳ ಸಾಮಾನ್ಯ ಪರಿಚಯ ಕುರಿತು ಮಾಹಿತಿ ನೀಡುವರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share