25ರ೦ದು ವಿಶೇಷ ಚೇತನರ ರಾಜ್ಯಮಟ್ಟದ ಪಂದ್ಯಾವಳಿ

310
Share

 

ರಾಜ್ಯಮಟ್ಟದ ಟೆನ್ನಿಸ್‌ಬಾಲ್ ಕ್ರಿಕೆಟ್‌ ಪಂದ್ಯಾವಳಿಯನ್ನು 25 ಮತ್ತು 26 ಫೆಬ್ರವರಿ 2023 ರಂದು ಚೆಸೈರ್ ಡಿಸಬಊಟ ಟ್ರಸ್ಟ್, ಬೆಂಗಳೂರು ಇವರ ಸಹಯೋಗದೊಂದಿಗೆ ಆಯೋಜಿಸಿದೆ. ಎಂದು ಪ್ರಾಂಶುಪಾಲರಾದ ಇಳಂಗೋವನ್ ಅವರು ತಿಳಿಸಿದರು
ಮೈಸೂರಿನ ಜೆಎಸ್‌ಎಸ್‌ ಮಹಾವಿದ್ಯಾಪೀಠವು ವಿಶೇಷಚೇತನ ವಿದ್ಯಾರ್ಥಿಗಳಿಗೆ ಡಿಪ್ಲೊಮಾ ಹಂತದಲ್ಲಿ ತಾಂತ್ರಿಕ ಶಿಕ್ಷಣವನ್ನು ನೀಡುವ ಉದ್ದೇಶದಿಂದ 1991 ರಲ್ಲಿ ಕರ್ನಾಟಕ ಸರ್ಕಾರದ ವಿಶ್ವ ಬ್ಯಾಂಕ್ ನೆರವಿನ ಯೋಜನೆಯಡಿಯಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ಪೂರ್ಣ ಸಹಕಾರದಿಂದ ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್‌ ಸಂಸ್ಥೆಯನ್ನು ಮೈಸೂರಿನಲ್ಲಿ ಸ್ಥಾಪಿಸಿದೆ. ಈ ಪಾಅಟೆಕ್ನಿಕ್‌ ವಿಶೇಷಚೇತನ ವಿದ್ಯಾರ್ಥಿಗಳಿಗೆ ಡಿಪ್ಲೊಮ ಹಂತದಲ್ಲಿ ತಾಂತ್ರಿಕ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಸ್ಥಾಪಿತವಾದ ರಾಷ್ಟ್ರದ ಮೊಟ್ಟ ಮೊದಲ ಹಾಗೂ ರಾಜ್ಯದ ಏಕೈಕ ಸಂಸ್ಥೆಯಾಗಿದೆ. ಸಂಸ್ಥೆಯು ಮೂರು ವರ್ಷಗಳ ಅವಧಿಯ 7 ಕೋರ್ಸುಗಳನ್ನು ನಡೆಸುತ್ತಿದೆ. ಸಂಸ್ಥೆಯು ಸಂಪೂರ್ಣವಾಗಿ ವಿಶೇಷಚೇತನ ವಿದ್ಯಾರ್ಥಿಗಳ ಅನುಕೂಲಕ್ಕೆ ಅನುಗುಣವಾಗಿ ಅಡೆತಡೆರಹಿತ ಕಟ್ಟಡವನ್ನು ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಯಂತೆ ನಿರ್ಮಿಸಿದೆ. ಎಂದು ಇಂದು ಬೆಳಗ್ಗೆ ಮೈಸೂರು ನಗರದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಬಗ್ಗೆ ವಿವರ ನೀಡಿದರು
ಸಂಸ್ಥೆಯಲ್ಲಿ ಇದುವರೆಗೆ ಸುಮಾರು 2,700 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ಡಿಪ್ಲೊಮಾ ಪಡೆದು, ನಂತರ ಕೆಲವರು ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣವನ್ನೂ ಸಹ ಪೂರೈಸಿರುತ್ತಾರೆ. ಅಲ್ಲದೆ, ಡಿಪ್ಲೊಮಾ ಪಡೆದ ವಿದ್ಯಾರ್ಥಿಗಳು ಸರ್ಕಾರ / ಸರ್ಕಾರೇತರ ಸಂಸ್ಥೆಗಳಲ್ಲಿ ಉದ್ಯೋಗಗಳಲ್ಲಿದ್ದು ಸಮಾಜದಲ್ಲಿ ಗೌರವಯುತ ಜೀವನ ನಡೆಸುತ್ತಿದ್ದಾರೆ.
ಸಂಸ್ಥೆಯು ವಿಶೇಷಚೇತನರಿಗೆ ನೀಡುತ್ತಿರುವ ಸೇವೆಯನ್ನು ಪರಿಗಣಿಸಿ 2012ರಲ್ಲಿ ಕೇಂದ್ರ ಸರ್ಕಾರ ರಾಷ್ಟ್ರ ಪ್ರಶಸ್ತಿ’ ಹಾಗೂ 2016ರಲ್ಲಿ ಕರ್ನಾಟಕ ಸರ್ಕಾರ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿವೆ.
ಈ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘವು ಕಳೆದ ಹಲವು ವರ್ಷಗಳಿಂದ ವಿಶೇಷಚೇತನರ ಶೈಕ್ಷಣಿಕ ಹಾಗೂ ಇತರೆ ಶ್ರೇಯೋಭಿವೃದ್ಧಿಗಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ.
ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್‌ನ ಹಿರಿಯ ವಿದ್ಯಾರ್ಥಿಗಳ ಸಂಘವು ಪ್ರತಿ ವರ್ಷವು ವಲಯಮಟ್ಟದ ಹಾಗೂ ರಾಜ್ಯಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸುತ್ತಿದೆ. ಇದರಂತೆ ಈ ಸಾಲಿನಲ್ಲಿ ಶ್ರವಣದೋಷವುಳ್ಳವರ ರಾಜ್ಯಮಟ್ಟದ ಟೆನ್ನಿಸ್‌ಬಾಲ್ ಕ್ರಿಕೆಟ್‌ ಪಂದ್ಯಾವಳಿಯನ್ನು 25 ಮತ್ತು 26 ಫೆಬ್ರವರಿ 2023 ರಂದು ಚೆಸೈರ್ ಡಿಸಬಊಟ ಟ್ರಸ್ಟ್, ಬೆಂಗಳೂರು ಇವರ ಸಹಯೋಗದೊಂದಿಗೆ ಆಯೋಜಿಸಿದೆ.
ಈ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 10 ತಂಡಗಳು ಭಾಗವಹಿಸಲಿದ್ದು, ಸ್ಪರ್ಧೆಯ ವಿಜೇತರಿಗೆ ರೂ. 10,000/-, ರನ್ನ‌ಗಳಿಗೆ ರೂ. 6,000/- ಗಳ ನಗದು ಬಹುಮಾನದೊಂದಿಗೆ ಪಾರಿತೋಷಕ, ಪದಕ ಮತ್ತು ಪ್ರಮಾಣಪತ್ರಗಳನ್ನು ವಿತರಿಸಲಾಗುವುದು.
ಫೆಬ್ರವರಿ 26 ರಂದು ಹಿರಿಯ ವಿದ್ಯಾರ್ಥಿಗಳ ಸಂಘದ ಸಭೆಯನ್ನು ಏರ್ಪಡಿಸಲಾಗಿದೆ ಎಂದು  ತಿಳಿಸಿದರು ಪತ್ರಿಕಾಗೋಷ್ಠಿಯಲ್ಲಿ ಸಿಬ್ಬಂದಿ ವರ್ಗದವರು ಹಾಗು ಪ್ರಾಧ್ಯಾಪಕರು ಉಪಸ್ಥಿತರಿದ್ದರು

Share