25 ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ

406
Share

ಮೈಸೂರು,
ಅತಿಥಿ ಉಪನ್ಯಾಸಕರ ಶಿಕ್ಷಕರ ವೇತನ ಬಿಕ್ಕಟ್ಟನ್ನು ಪರಿಹರಿಸಲು ಮತ್ತು ವಿಶೇಷ ಪರಿಹಾರಕ್ಕೆ ಆಗ್ರಹಿಸಿ ಜೂನ್ 25 ರಂದು ರಾಜ್ಯವ್ಯಾಪಿ ಪ್ರತಿಭಟನೆ ದ ಆಚರಿಸಲಾಗುತ್ತದೆ ಎಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಆರ್ಗನೈಜೇಷನ್ ಕಾರ್ಯದರ್ಶಿಗಳಾದ ಸುನಿಲ್ ಅವರು ತಿಳಿಸಿದ್ದಾರೆ.
.ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ವಿವಿಧ ಕ್ಷೇತ್ರಗಳಿಗೆ ಸರ್ಕಾರವು ಪರಿಹಾರವನ್ನು ನೀಡಿರುವಂತೆ ಅತಿಥಿ ಉಪನ್ಯಾಸಕರು ಮತ್ತು ಅತಿಥಿ ಶಿಕ್ಷಕ ವೃಂದದವರು ಸಹ ಕನಿಷ್ಠಪಕ್ಷ ಒಂದು ಬಾರಿ ಪರಿಹಾರ ಪ್ಯಾಕೇಜನ್ನು ಘೋಷಿಸಬೇಕು, ಹುದ್ದೆಗಳಿಗೆ ಶಿಕ್ಷಕರು ಮತ್ತು ಉಪನ್ಯಾಸಕರನ್ನು ನೇಮಕ ಪ್ರಕ್ರಿಯೆಯನ್ನು ಕೂಡಲೇ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ . ಜೂನ್ 25ರಂದು ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.


Share