26/02/2022 ರ ಸರ್ಕಾರಿ ಅರ್ಜಿ ಆಹ್ವಾನ

260
Share

ಬಿಳಿಗೆರೆ: ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮೈಸೂರು, – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಬಿಳಿಗೆರೆ ಹೋಬಳಿಯ ವ್ಯಾಪ್ತಿಯ ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕಿಯರ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹೋಬಳಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಅಡಿಯಲ್ಲಿ ಖಾಲಿ ಇರುವ 05 ಅಂಗನವಾಡಿ ಕಾರ್ಯಕರ್ತೆ ಮತ್ತು 13 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ 2022ರ ಮಾರ್ಚ್ 22 ಸಂಜೆ 5:30 ಗಂಟೆಯವರೆಗು ಅರ್ಹ ಮಹಿಳಾ ಅಭ್ಯರ್ಥಿಗಳು https://anganwadirecruit.kar.nic.in/ ವೆಬ್‌ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಹೋಬಳಿಯ ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕಿಯರ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಕಛೇರಿಯ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಿ.ನರಸೀಪುರ: ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮೈಸೂರು, :- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ತಿ.ನರಸೀಪುರ ತಾಲ್ಲೂಕಿನ ವ್ಯಾಪ್ತಿಯ ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕಿಯರ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ತಾಲ್ಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಅಡಿಯಲ್ಲಿ ಖಾಲಿ ಇರುವ 03 ಅಂಗನವಾಡಿ ಕಾರ್ಯಕರ್ತೆ ಮತ್ತು 15 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ 2022ರ ಮಾರ್ಚ್ 22ರವರೆಗು ಅರ್ಹ ಮಹಿಳಾ ಅಭ್ಯರ್ಥಿಗಳು https://anganwadirecruit.kar.nic.in/ ವೆಬ್‌ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಛೇರಿಯ ವೇಳೆಯಲ್ಲಿ ದೂ.ಸಂ.08227-261267 ಅನ್ನು ಸಂಪರ್ಕಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾದ ಬಿ.ಎನ್.ಬಸವರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share