41 ಕಾರ್ಮಿಕರ ಮರುಜನ್ಮಕ್ಕೆ ಕಾರಣರಾದ ಕಾರ್ಯಾಚರಣೆ ತಂಡಕ್ಕೆ ಮುಖ್ಯಮಂತ್ರಿ ಧನ್ಯವಾದ

15
Share

ಸತತ ಹದಿನೇಳು ದಿನಗಳ ರಕ್ಷಣಾ ಕಾರ್ಯಾಚರಣೆ ನಂತರ ಉತ್ತರಾಖಂಡದ ಸುರಂಗದೊಳಗೆ ಸಿಲುಕಿಕೊಂಡಿದ್ದ ಎಲ್ಲಾ 41 ಕಾರ್ಮಿಕರು ಸುರಕ್ಷಿತವಾಗಿ ಹೊರಬಂದಿರುವುದು ನೋಡಿ ಅತ್ಯಂತ ಖುಷಿಯಾಯಿತು. ಈ ಸವಾಲಿನ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಎಲ್ಲಾ ರಕ್ಷಣಾ ಸಿಬ್ಬಂದಿಗಳಿಗೆ ಧನ್ಯವಾದಗಳು.
ನಿಮ್ಮ ಶ್ರಮ ಮತ್ತು ನಿರಂತರ ಪ್ರಯತ್ನದಿಂದ ಸುರಂಗದೊಳಗೆ ಸಿಲುಕಿದ್ದ ಕಾರ್ಮಿಕರಿಗೆ ಮರುಹುಟ್ಟು ಸಿಕ್ಕಂತಾಗಿದೆ.
ಕೋಟ್ಯಂತರ ಭಾರತೀಯರ ಹಾರೈಕೆಗಳು, ಕಾರ್ಮಿಕರ ಕುಟುಂಬ ಸದಸ್ಯರ ಪ್ರಾರ್ಥನೆ ಈ ಕ್ಷಣ ಫಲ ನೀಡಿದೆ ಇಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟ್ವೀಟ್ ಮೂಲಕ ತಿಳಿಸಿದ್ದಾರೆ

 


Share