ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ಭವ್ಯ ಸ್ವಾಗತ ವೀಕ್ಷಿಸಿ

723
Share

 

ಮೈಸೂರು 21ರಂದು ನಡೆಯಲಿರುವ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಮೈಸೂರಿಗೆ ಆಗಮಿಸಿರುವ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಹೆಲಿಪ್ಯಾಡ್ ಇನಲ್ಲಿ ಭವ್ಯ ಸ್ವಾಗತವನ್ನು ನೀಡಲಾಯಿತು

ಸಾಂಸ್ಕೃತಿಕ ನಗರಿ ಮೈಸೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಂತೆ ಓವಲ್ ಮೈದಾನದಲ್ಲಿ ನಿರ್ಮಾಣ ಮಾಡಿದ್ದ ಹೆಲಿಪ್ಯಾಡ್ ನಲ್ಲಿ ರಾಜ್ಯಪಾಲರ ತಾವರ್ ಚಂದ್ ಗೊಹಲಾಟ್. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ.ಆರೋಗ್ಯ ಸಚಿವ ಡಾಕ್ಟರ್ ಸುಧಾಕರ್. ರೇಷ್ಮೆ ಖಾತೆ ಸಚಿವ ನಾರಾಯಣಸ್ವಾಮಿ ಅಬ್ಕಾರಿ ಸಚಿವ ಗೋಪಾಲಯ್ಯ ಸಂಸದರಾದ ಪ್ರತಾಪ್ ಸಿಂಹ.ಮೇಯರ್ ಸುನಂದಾ ಪಾಲನೇತ್ರ.
ಶಾಸಕರುಗಳದ ಎಲ್ ನಾಗೇಂದ್ರ ಜಿ.ಟಿ ದೇವೇಗೌಡ. ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಮೈಸೂರು ನಗರ ಪೊಲೀಸ್ ಆಯುಕ್ತ ಡಾ ಚಂದ್ರಗುಪ್ತ ಹಾಗೂ ಬಿಜೆಪಿ ಕಾರ್ಯಕರ್ತರು ಆದರದಿಂದ ಸ್ವಾಗತಿಸಿದರು

ಇದೇ ಸಂದರ್ಭದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿಟಿ ದೇವೇಗೌಡರು ಪ್ರಧಾನಿಯವರಿಗೆ ಮನವಿ ಪತ್ರವೊಂದನ್ನು ನೀಡಿದರು

 

 


Share