ಮೈಸೂರು ಮತದಾರರ ಅಂಕಿ ಅಂಶ

Share

 

ಚುನಾವಣಾ ವೇಳಾ ಪಟ್ಟಿ ಪ್ರಕಟ:ತಕ್ಷಣದಿಂದ ಮಾದರಿ ನೀತಿ ಸಂಹಿತೆ ಜಾರಿ

-ಡಾ.ಕೆ.ವಿ.ರಾಜೇಂದ್ರ

 ಮೈಸೂರು,- ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಗಳು 2023 ರ ಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ಚುನಾವಣಾ ಮಾದರಿ ನೀತಿ ಸಂಹಿತೆಯು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ನೀಡಿರುವ ಹಿನ್ನೆಲೆ ಪ್ರತಿಯೊಬ್ಬರು ಚುನಾವಣೆ ನೀತಿ ಸಂಹಿತೆಯನ್ನು ಪಾಲಿಸಬೇಕು ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದರು.

 ತಮ್ಮ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಏಪ್ರಿಲ್ 13 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಗುವುದು. ಏಪ್ರಿಲ್ 20 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು ಏಪ್ರಿಲ್ 21 ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು. 24 ಉಮೇದುಗಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು ಮೇ 10 ಚುನಾವಣೆ ನಡೆಯುವುದು ಮೇ 13 ರಂದು ಮತ ಎಣಿಕೆಯಾಗುವುದು ಮೇ 15 ಚುನಾವಣೆ ಮುಕ್ತಾಯಗೊಳ್ಳುವುದು ಮತ್ತು ಅಲ್ಲಿಯವರೆಗೂ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದರು.

 ಮೈಸೂರಿನಲ್ಲಿ 11 ವಿಧಾನಸಭಾ ಕ್ಷೇತ್ರಗಳಿದ್ದು, 26,22,551 ಮತದಾರರಲ್ಲಿ 13,01,022 ಪುರುಷ ಮತದಾರರು 13,21,316 ಮಹಿಳಾ ಮತದಾರರು ಹಾಗೂ 213 ತೃತೀಯ ಲಿಂಗಿ ಮತದಾರರಿದ್ದಾರೆ. ಈ ಬಾರಿ 17,162 ಯುವ ಮತದಾರರು ನೋಂದಣಿಯಾಗಿದ್ದು ಒಟ್ಟು ಜಿಲ್ಲೆಯಲ್ಲಿ 47,812 ಯುವ ಮತದಾರರಿದ್ದಾರೆ. ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿರುವವರು ಫಾರ್ಮ್ -6 ನ್ನು ಭರ್ತಿ ಮಾಡಿ ಏಪ್ರಿಲ್ 11ರ ವರೆಗೂ ಅರ್ಜಿಗಳನ್ನು ಸಲ್ಲಿಸಬಹುದು ಎಂದು ತಿಳಿಸಿದರು.


Share