ಗುರಿ ದೊಡ್ಡದಾಗಿರಲಿ, ಪ್ರಯತ್ನ ನಿರಂತರವಾಗಿರಲಿ

67
Share

ಗುರಿ ದೊಡ್ಡದಾಗಿರಲಿ, ಪ್ರಯತ್ನ ನಿರಂತರವಾಗಿರಲಿ-ಡಾ.ಕೆ.ವಿ. ರಾಜೇಂದ್ರ*

ಮೈಸೂರು,ಮಾ.:- ಪ್ರಸ್ತುತ ನಾವು ಸ್ಪರ್ಧಾತ್ಮಕ ಯುಗದಲ್ಲಿ ಬದುಕುತ್ತಿದ್ದೇವೆ. ಇಲ್ಲಿ ಯಾವುದೇ ಸ್ಪರ್ಧಾತ್ಮಕ ಪರೀಕ್ಷಾರ್ಥಿಯೂ ಏನನ್ನೇ ಸಾಧಿಸಬೇಕಾದರೂ ಮೊದಲು  ತನ್ನ ಗುರಿಯನ್ನು ದೊಡ್ಡದಾಗಿರಿಸಿಕೊಂಡು, ಅದರ ಕಡೆಗೆ ನಿರಂತರ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ ರಾಜೇಂದ್ರ ಅವರು   ಸಲಹೆ ನೀಡಿದರು.

ಇಂದು ಮೈಸೂರು ವಿಶ್ವವಿದ್ಯಾನಿಲಯ ವೃತ್ತಿ ಕೇಂದ್ರ, ಮೈಸೂರು ವಿಶ್ವವಿದ್ಯಾನಿಲಯ ನೇಗಿಲಯೋಗಿ ವಿದ್ಯಾವರ್ಧಕ ಸ್ಪರ್ಧಾ ಕೇಂದ್ರದ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಯುವರಾಜ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕೆ.ಎ.ಎಸ್ ಹುದ್ದೆಯ ಆಕಾಂಕ್ಷಿಗಳಿಗೆ ಉಚಿತ ಕಾರ್ಯಾಗಾರ  ಉದ್ಘಾಟಿಸಿ ಅವರು ಮಾತನಾಡಿದರು.

ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಪರ್ಧೆ ಸಾಮಾನ್ಯವಾಗಿದ್ದು, ಯುಪಿಎಸ್‌ಸಿ, ಕೆ.ಎ.ಎಸ್ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯಾಗಲು ಸಿಕ್ಕ ಅವಕಾಶಗಳನ್ನು ಸದುಯೋಗಪಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರತಿದಿನ 5 ರಿಂದ 6 ಗಂಟೆಗಳ ಕಾಲ ನಿಯಮಿತವಾಗಿ ಓದುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಪ್ರತಿಯೊಬ್ಬ ಪರೀಕ್ಷಾರ್ಥಿಗು ಕಠಿಣ ಪರಿಶ್ರಮ, ತಾಳ್ಮೆ, ಸಮಯ ಪ್ರಜ್ಞೆ , ಏಕಾಗ್ರತೆ ಎಂಬುದು ಬಹಳ ಮುಖ್ಯವಾಗಿದ್ದು, ಅದನ್ನು ಮೈಗೂಡಿಸಿಕೊಳ್ಳಬೇಕು ಎಂದರು.

 


Share