9200 ಗರ್ಭಿಣಿಯರಿಗೆ ತಲುಪಿದ ಮಡಿಲು ಯೋಜನೆ : ರಾಮದಾಸ್:

63
Share

 

 

9200 ಗರ್ಭಿಣಿಯರಿಗೆ ತಲುಪಿದ ಮಡಿಲು ಯೋಜನೆ : ರಾಮದಾಸ್:

ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ಪ್ರತಿ ಹಂತದಲ್ಲಿಯೂ ಮಾದರಿ ನಡೆ ಅನುಸರಿಸಿದ್ದು, ಈವರೆಗೆ 9200 ಗರ್ಭಿಣಿಯರಿಗೆ ಮಡಿಲು ಯೋಜನೆ ತಲುಪಿಸಲಾಗಿದೆ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು.
ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ 64ರಲ್ಲಿ ಯೋಗಕ್ಷೇಮ ಯಾತ್ರೆ ಪ್ರಯುಕ್ತ ವಿವೇಕಾನಂದನಗರ ಬಡಾವಣೆಯ ಗಣಪತಿ ದೇವಸ್ಥಾನ ಆವರಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಮ್ಮ ಕ್ಷೇತ್ರದ ಗರ್ಭಿಣಿಯರ ಅಣ್ಣನಾಗಿ ಸೇವೆ ಮಾಡಲಿಕ್ಕೆ ಇಂದು ಸದವಕಾಶವ ನನ್ನ ಪಾಲಿಗೆ ಲಭಿಸಿರುವುದು ಹೆಮ್ಮೆಯ ವಿಷಯ. ಈವರೆಗೆ ಕ್ಷೇತ್ರದಲ್ಲಿ 8800 ಗರ್ಭಿಣಿಯರಿಗೆ ಮಡಿಲು ತುಂಬಲಾಗಿದೆ. ನಾಳೆ (ಮಾ.18) ಇನ್ನೂ 400 ಗರ್ಭಿಣಿ ಹೆಣ್ಣುಮಕ್ಕಳಿಗೆ ಮಡಿಲು ತುಂಬಲಾಗುತ್ತಿದೆ. ಪ್ರತಿ ಆರು ತಿಂಗಳಿಗೊಮ್ಮೆ ಈ ಕಾರ್ಯ ಕ್ಷೇತ್ರದಲ್ಲಿ ನಡೆಯುತ್ತಿದೆ ಎಂದರು.
ಇಡೀ ಕ್ಷೇತ್ರ ಮಾದರಿ ಎಂಬುದಕ್ಕೆ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳೇ ಕ್ಷೇತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿರುವುದೇ ಸಾಕ್ಷಿಯಾಗಿದೆ. ಮನುಷ್ಯರಿಗೆ ಮಾತ್ರವಲ್ಲ, ಬೀದಿ ನಾಯಿಗಳು ಹಾಗೂ ಕೋತಿಗಳು ಕೂಡ ಗೌರವಯುತ ಬದುಕು ಸಾಗಿಸಬೇಕೆನ್ನುವ ಆಶಯದಿಂದ ಅವುಗಳಿಗಾಗಿ ಸುಸಜ್ಜಿತವಾದ ಪುನರ್ವಸತಿ ಕೇಂದ್ರ ಸ್ಥಾಪಿಸಲಾಗಿದೆ. ಇದೇ ತಿಂಗಳ 25ರಂದು ನಾಯಿಗಳ ಪುನರ್ವಸತಿ ಕೇಂದ್ರ ಲೋಕಾರ್ಪಣೆ ಆಗಲಿದೆ ಎಂದು ಹೇಳಿದರು.
ಕ್ಷೇತ್ರದಲ್ಲಿರುವ ತುಳಸೀದಾಸ್ ದಾಸಪ್ಪ ಆಸ್ಪತ್ರೆ ಹಾಗೂ ಜಯನಗರ ಆಸ್ಪತ್ರೆ ಇಂದು ಯಾವುದೇ ಖಾಸಗಿ ಆಸ್ಪತ್ರೆಗೆ ಸರಿಸಾಟಿಯಾಗಿ ನಿರ್ಮಿಸಲಾಗಿದೆ. ನಿರೀಕ್ಷೆ ಮೀರಿದ ಸೇವೆ ದೊರೆಯುತ್ತಿದೆ. ಪರಿಣಾಮ, ಜಯನಗರ ಆಸ್ಪತ್ರೆಗೆ ಕೇಂದ್ರ ಸರ್ಕಾರದಿಂದ 36 ಲಕ್ಷ ರೂಪಾಯಿ ಬಹುಮಾನ ಬಂದಿದೆ. ಅದು ಒಂದು ದಾಖಲೆಯಾಗಿದೆ ಎಂದು ತಿಳಿಸಿದರು.
ಅಂದುಕೊಂಡಂತೆ ಕಳೆದ ಐದು ವರ್ಷಗಳಲ್ಲಿ ಗರಿಷ್ಠ ಪ್ರಮಾಣದ ಕಾರ್ಯಯೋಜನೆ ರೂಪಿಸಿ ಅನುಷ್ಠಾನ ಮಾಡುವ ಮೂಲಕ ರಾಜ್ಯದಲ್ಲಿಯೇ ನಂಬರ್ ಒನ್ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನಿಮ್ಮೆಲ್ಲರ ವಿಶ್ವಾಸ, ಪ್ರೀತಿ, ಸಹಕಾರವೇ ಕಾರಣವಾಗಿದೆ. ಇಡೀ ಕ್ಷೇತ್ರವನ್ನು ಬೋರ್ವೆಲ್ ಮುಕ್ತ ಮಾಡಲಾಗಿದೆ. ‌482 ಕಿಮೀ ರಸ್ತೆಯನ್ನು ಸಂಪೂರ್ಣವಾಗಿ ಡಾಂಬರೀಕರಣ ಮಾಡಲಾಗಿದೆ. ‌ರಾಜಕಾಲುವೆ, ಯುಜಿಡಿ, ಮಳೆ ನೀರಿನ ವ್ಯವಸ್ಥೆಯನ್ನು ಸರಿಪಡಿಸಲಾಗಿದೆ ಎಂದರು.


Share