ಕಾಂಗ್ರೆಸ್ ನಿಂದ 10 ಜನ ಶಾಸಕರು ಬಿಜೆಪಿಗೆ ಸದ್ಯದಲ್ಲೇ ಸೇರ್ಪಡೆಯಾಗಲಿದ್ದಾರೆ ಸಚಿವ ಅಶೋಕ್

133
Share

ಬೆಂಗಳೂರು, ಕಾಂಗ್ರೆಸ್ ಪಕ್ಷದಿಂದ 10 ಜನ ಶಾಸಕರು ಭಾರತೀಯ ಜನತಾ ಪಕ್ಷಕ್ಕೆ ಅತಿ ಶೀಘ್ರದಲ್ಲಿಯೇ ಸೇರ್ಪಡೆಯಾಗಲಿದ್ದಾರೆ ಎಂದು ಕಂದಾಯ ಸಚಿವ ಅಶೋಕ್ ಅವರು ತಿಳಿಸಿದ್ದಾರೆ.

ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ಪಕ್ಷ ಸರಿಯಾಗಿ ಇದ್ದಿದ್ದರೆ ಭಾರತೀಯ ಜನತಾ ಪಕ್ಷಕ್ಕೆ ಏಕೆ ಬಂದು ಸೇರುತ್ತಿದ್ದರು ಎಂದು ಅವರು ಪ್ರಶ್ನಿಸಿದ್ದಾರೆ.

ಸದರಿ ಶಾಸಕರು ಈಗಾಗಲೇ ಬಿಜೆಪಿ ಪಕ್ಷದ ಜೊತೆ ನಿಕಟ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದ ಅಶೋಕ್ ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ 15 ಶಾಸಕರನ್ನು ತಮ್ಮ ಪಕ್ಷದಲ್ಲೇ ಉಳಿಸಿಕೊಳ್ಳಲು ಅವರಿಗೆ ತಾಕತ್ತು ಇರಲಿಲ್ಲ ಎಂದು ವಾಗ್ದಾಳಿ ನಡೆಸಿದರು ದೇಶದಲ್ಲಿ ಕಾಂಗ್ರೆಸ್ ಪಕ್ಷ ಒಂದು ಮುಳುಗುತ್ತಿರುವ ಹಡಗಾಗಿದ್ದು ಕಾಂಗ್ರೆಸ್ ಪಕ್ಷದಿಂದ ಭಾರತೀಯ ಜನತಾ ಪಕ್ಷಕ್ಕೆ ಬರುತ್ತಾರಿಯ ಹೊರತು ಭಾರತೀಯ ಜನತಾ ಪಕ್ಷದಿಂದ ಯಾರು ವಲಸೆ ಹೋಗುವ ಪರಿಸ್ಥಿತಿ ಉದ್ಭವವಾಗಿಲ್ಲ ಎಂದು ಅಶೋಕ್ ಅವರು ಗುಡುಗಿದರು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಅನೇಕರು ಬರುವ ನಿರೀಕ್ಷೆ ಇದೆ ಎಂದು ಅಶೋಕ್ ಹೇಳಿದರು


Share