ಎಪಿಎಂಸಿ ತಿದ್ದುಪಡಿ ಕಾಯ್ದೆಗೆ ರಾಜ್ಯ ರೈತ ಸಂಘ ಸ್ವಾಗತ

ಕರ್ನಾಟಕ ರಾಜ್ಯ ಸರ್ಕಾರ ಕಳೆದ ಗುರುವಾರದಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಖಾಸಗಿ ವ್ಯಕ್ತಿಗಳು ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡುವುದಕ್ಕೆ ಸಂಬಂಧಿಸಿದಂತೆ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ಅಧಿನಿಯಮಕ್ಕೆ ತಿದ್ದುಪಡಿ ತಂದಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ಇದನ್ನು ಕರ್ನಾಟಕ ರಾಜ್ಯ ರೈತ ಸಂಘ ಸ್ವಾಗತಿಸುತ್ತದೆ. ಈ ಕಾಯಿದೆಗೆ ತಿದ್ದುಪಡಿ ತಂದಿರುವುದು ನಮಗೆ ಸಂತಸ ತಂದಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಎಸ್ ಎಸ್ ವರ್ಮಾ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕೆಲವು ರೈತ ಮುಖಂಡರು ತಿದ್ದುಪಡಿ ಕಾಯ್ದೆಯು ವಿರೋಧಿಸುತ್ತಿರುವುದು ನೋಡಿದರೆ ದಲ್ಲಾಳಿಗಳು ಹಾಗೂ ರೈತರ ನಡುವೆ ನಡೆದಿರುವ ಅವ್ಯವಹಾರದ ಬಗ್ಗೆ ಅನುಮಾನ ಬರುತ್ತಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.