*FSL ವರದಿಯಲ್ಲಿ ಘೋಷಣೆ ಕೂಗಿದ್ದು ಸಾಭೀತಾದರೆ, ಕೂಗಿದ್ದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ- ಸಿಎಂ

106
Share

 

*FSL ವರದಿಯಲ್ಲಿ ಘೋಷಣೆ ಕೂಗಿದ್ದು ಸಾಭೀತಾದರೆ, ಕೂಗಿದ್ದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ*: *ಮುಖ್ಯಮಂತ್ರಿ ಸಿದ್ದರಾಮಯ್ಯ*

ಬೆಂಗಳೂರು , ಫೆಬ್ರವರಿ 28.: ಎಫ್. ಎಸ್ .ಎಲ್ ವರದಿ ಬಂದ ನಂತರ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಈ ಬಗ್ಗೆ ಗಂಭೀರ ಕ್ರಮ ವಹಿಸಲಾಗುವುದು. ಪಾಕಿಸ್ತಾನದ ಪರವಾಗಿ ಘೋಷಣೆ ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ವಿಧಾನಸೌಧದಲ್ಲಿ ಇಂದು ಮಾಧ್ಯಮದರೊಂದಿಗೆ ಮಾತನಾಡಿದರು.

ರಾಷ್ಟ್ರದ ವಿರುದ್ಧ ಘೋಷಣೆ ಕೂಗಿರುವುದು ಸಾಭೀತಾದರೆ ಯಾರೇ ಆಗಲಿ ಕಠಿಣ ಕ್ರಮ ವಹಿಸಲಾಗುವುದು ಎಂದರು. ವಿಧಾನಸೌಧದಲ್ಲಿ ಈ ಘಟನೆ ಆಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ ಕೂಗುವವರಿಗೆ ಇಲ್ಲಿಯಾದರೇನು, ಎಲ್ಲಾದರೇನು ? ನಿಜ ಆಗಿದ್ದರೆ ಕಠಿಣ ಕ್ರಮ ಆಗುತ್ತದೆ ಎಂದರು.


Share