MP ಸ್ನ್ಯಾಕ್ಸ್ : ತ್ರಿವಳಿ ಸಂಗಮ 41

184
Share

ತ್ರಿವಳಿ ಸಂಗಮ : ಒಗಟು, ಗಾದೆ ಹಾಗೂ ರಸಪ್ರಶ್ನೆ
ಪುರಾತನ ಕಾಲದಿಂದಲೂ ಒಗಟುಗಳು ಹಾಗೂ ಗಾದೆಗಳು ಜನಜನಿತವಾದ ಅನುಭವಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಿರಿಯರು ಹೇಳುವ ಹಾಗೆ ಗಾದೆಗಳು ಎಂದು ಸುಳ್ಳಾಗುವುದಿಲ್ಲ. ತಾತ, ಅಜ್ಜಿ, ತಂದೆ, ತಾಯಿ ಹಾಗೂ ಹಿರಿಯರು ತಮ್ಮ ಮನೆಗಳಲ್ಲಿ ಮಕ್ಕಳು ಮಾಡಿದ ತಪ್ಪನ್ನು ತಿದ್ದಲು ಗಾದೆಗಳನ್ನು ಉದಾಹರಣೆಯಾಗಿ ಕೊಟ್ಟು ಅವರಿಗೆ ಚೆನ್ನಾಗಿ ಮನವರಿಕೆಯಾಗುವಂತೆ ಮಾಡುತ್ತಿದ್ದರು.
ಎಲ್ಲರೂ ಓದಿ ಆನಂದಿಸಿ ಮುಂದೆ ಬರುವ ನಿಮ್ಮ ಮಕ್ಕಳು ಮೊಮ್ಮಕ್ಕಳಿಗೂ ತಿಳಿಸಿ.

* ಒಗಟು :
ಹಲ್ಲಿಲ್ಲದವರು ಯಾರು
ಕಿವಿ ಇಲ್ಲದವರು ಯಾರು
ಗೊತ್ತಿದ್ರೆ ಹೇಳಿ ನೋಡೋಣ .

* ಗಾದೆ :
ಮಂತ್ರಕ್ಕೆ ಮಾವಿನ ಕಾಯಿ ಉದುರುತ್ತದೆಯೆ .

* ರಸಪ್ರಶ್ನೆ :
ಇಂದಿರಾಗಾಂಧಿ ಗೋಲ್ಡ್ ಕಪ್ ಯಾವ ಕ್ರೀಡೆಗೆ ಮೀಸಲು ?

*ಉತ್ತರ :
ಒಗಟು –
ಹಲ್ಲಿ ಮತ್ತು ಕಪ್ಪೆ
ರಸಪ್ರಶ್ನೆ –
ಮಹಿಳಾ ಹಾಕಿ

* ಸಂಗ್ರಹ
ಟಿ.ವಿ.ಪದ್ಮ ಶೇಖರ್
ಮೇಲುಕೋಟೆ


Share