MP ಸ್ನ್ಯಾಕ್ಸ್ : ತ್ರಿವಳಿ ಸಂಗಮ – 65

183
Share

ತ್ರಿವಳಿ ಸಂಗಮ : ಒಗಟು, ಗಾದೆ ಹಾಗೂ ರಸಪ್ರಶ್ನೆ – 65

ಪುರಾತನ ಕಾಲದಿಂದಲೂ ಒಗಟುಗಳು ಹಾಗೂ ಗಾದೆಗಳು ಜನಜನಿತವಾದ ಅನುಭವಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಿರಿಯರು ಹೇಳುವ ಹಾಗೆ ಗಾದೆಗಳು ಎಂದು ಸುಳ್ಳಾಗುವುದಿಲ್ಲ. ತಾತ, ಅಜ್ಜಿ, ತಂದೆ, ತಾಯಿ ಹಾಗೂ ಹಿರಿಯರು ತಮ್ಮ ಮನೆಗಳಲ್ಲಿ ಮಕ್ಕಳು ಮಾಡಿದ ತಪ್ಪನ್ನು ತಿದ್ದಲು ಗಾದೆಗಳನ್ನು ಉದಾಹರಣೆಯಾಗಿ ಕೊಟ್ಟು ಅವರಿಗೆ ಚೆನ್ನಾಗಿ ಮನವರಿಕೆಯಾಗುವಂತೆ ಮಾಡುತ್ತಿದ್ದರು.
ಎಲ್ಲರೂ ಓದಿ ಆನಂದಿಸಿ ಮುಂದೆ ಬರುವ ನಿಮ್ಮ ಮಕ್ಕಳು ಮೊಮ್ಮಕ್ಕಳಿಗೂ ತಿಳಿಸಿ.

* ಒಗಟು :
ಕತ್ತಲೆಯ ಮನೆಯಲ್ಲಿ ಕಂಬ ಬಿದ್ದರೆ
ನಿಮ್ಮಪ್ಪನೂ ಎತ್ತಲಾರ ನಮ್ಮಪ್ಪನೂ ಎತ್ತಲಾರ

* ಗಾದೆ :
ನಾಳೆ ಎಂದವನ ಮನೆ ಹಾಳು

* ರಸಪ್ರಶ್ನೆ :
ಅಲೆಗ್ಸಾಂಡರ್ ಭಾರತದ ಮೇಲೆ ಆಕ್ರಮಣ ಮಾಡಿದ ವರ್ಷ ಯಾವುದು ?

* ಜಾಣ್ಮೆಯ ಉತ್ತರ :
ಒಗಟು –
ಸೂಜಿ
ರಸಪ್ರಶ್ನೆ –
ಕ್ರಿ.ಪೂ. 327-326

* ಸಂಗ್ರಹ
ಟಿ.ವಿ.ಪದ್ಮ ಶೇಖರ್
ಮೇಲುಕೋಟೆ


Share