MP ಸ್ನ್ಯಾಕ್ಸ್ : ತ್ರಿವಳಿ ಸಂಗಮ – 75

202
Share

ತ್ರಿವಳಿ ಸಂಗಮ : ಒಗಟು, ಗಾದೆ ಹಾಗೂ ರಸಪ್ರಶ್ನೆ – 75

ಪುರಾತನ ಕಾಲದಿಂದಲೂ ಒಗಟುಗಳು ಹಾಗೂ ಗಾದೆಗಳು ಜನಜನಿತವಾದ ಅನುಭವಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಿರಿಯರು ಹೇಳುವ ಹಾಗೆ ಗಾದೆಗಳು ಎಂದು ಸುಳ್ಳಾಗುವುದಿಲ್ಲ. ತಾತ, ಅಜ್ಜಿ, ತಂದೆ, ತಾಯಿ ಹಾಗೂ ಹಿರಿಯರು ತಮ್ಮ ಮನೆಗಳಲ್ಲಿ ಮಕ್ಕಳು ಮಾಡಿದ ತಪ್ಪನ್ನು ತಿದ್ದಲು ಗಾದೆಗಳನ್ನು ಉದಾಹರಣೆಯಾಗಿ ಕೊಟ್ಟು ಅವರಿಗೆ ಚೆನ್ನಾಗಿ ಮನವರಿಕೆಯಾಗುವಂತೆ ಮಾಡುತ್ತಿದ್ದರು.
ಎಲ್ಲರೂ ಓದಿ ಆನಂದಿಸಿ ಮುಂದೆ ಬರುವ ನಿಮ್ಮ ಮಕ್ಕಳು ಮೊಮ್ಮಕ್ಕಳಿಗೂ ತಿಳಿಸಿ.

* ಒಗಟು :
ಹಳ್ಳದಲ್ಲೊಬ್ಬ ಕಳ್ಳ , ಕೂತ್ಕೊಂಡು ಬಂದವರನ್ನೆಲ್ಲ ಹಿಡಿತಾನೆ

* ಗಾದೆ :
ಗಂಡಸರ ಕೈಯಲ್ಲಿ ಕೂಸು ನಿಲ್ಲದು ,
ಹೆಂಗಸರ ಬಾಯಲ್ಲಿ ಮಾತು ನಿಲ್ಲದು

* ರಸಪ್ರಶ್ನೆ :
ನಮ್ಮ ಭಾರತ ದೇಶದ ಸಿಹಿ ತಿಂಡಿ ಯಾವುದು ?

* ಉತ್ತರ :
ಒಗಟು –
ಗಾಳ
ರಸಪ್ರಶ್ನೆ –
ಜಿಲೇಬಿ

* ಸಂಗ್ರಹ
ಟಿ.ವಿ.ಪದ್ಮ ಶೇಖರ್
ಮೇಲುಕೋಟೆ


Share