S.S.L.C. ಪರೀಕ್ಷೆ ಆರಂಭ -ಮಾಸ್ಕ್ ಇಲ್ಲದಿದ್ದರೂ ಪರೀಕ್ಷೆ ಬರೆಯಬಹುದು – ಕೆಎಸ್ಆರ್ಟಿಸಿ ಬಸ್ ಬಸ್ಸಿನಲ್ಲಿ ಉಚಿತ ಪ್ರಯಾಣ

229
Share

 

 

 

 

ಕರ್ನಾಟಕದಲ್ಲಿ ಇ0ದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಿದೆ. 

15,387 ಶಾಲೆಗಳಲ್ಲಿ 8,73,846 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಗಳಿಗೆ ಹೋಗುವಂತಿಲ್ಲ ಎಂದು ಆದೇಶಿಸಲಾಗಿದೆ.
ಎಸೆಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಲು ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಉಚಿತವಾಗಿ ತೆರಳಲು ಅವಕಾಶ ಮಾಡಿಕೊಡಲಾಗಿದೆ. ಆದರೆ ವಿದ್ಯಾರ್ಥಿಗಳು ಹಾಲ್ ಟಿಕೆಟ್ ಪ್ರವೇಶ ಪತ್ರ, ಬಸ್ ಕಂಡಕ್ಟರಿಗೆ ತೋರಿಸಿ ಉಚಿತ ಪ್ರಯಾಣ ಮಾಡಲು ಸೂಚಿಸಲಾಗಿದೆ
ವಿದ್ಯಾರ್ಥಿಗಳಿಗೆ ಗೊಂದಲ ಹಾಗೂ ತೊಂದರೆ ಉಂಟಾದರೆ 080-23310075/76 ಸಂಖ್ಯೆಗೆ ವಿದ್ಯಾರ್ಥಿಗಳು ಕರೆ ಮಾಡುವ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಮಾರ್ಚ್ 28 ರಿಂದ ಏಪ್ರಿಲ್ 11ರ ತನಕ ಪರೀಕ್ಷೆಗಳು ನಡೆಯಲಿವೆ.
ಮೈಸೂರಿನಲ್ಲಿ ಕೆ ಆರ್ ಕ್ಷೇತ್ರದ ಶಾಸಕರಾದ ರಾಮದಾಸ್ ಅವರು ನಗರದ ಸೆಂಟ್ ಮೇರಿಸ್ ಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಗುಲಾಬಿ ಹೂವನ್ನು ನೀಡಿ ಶುಭಕೋರಿದರು.

Share