SI, ವಿರುದ್ಧ ಸಾರ್ವಜನಿಕರು ಆಕ್ರೋಶ

ಮೈಸೂರು: ರಾಜ್ಯದಲ್ಲಿ ಕೊರೊನಾ ಹೆಚ್ಚುತ್ತಿದ್ದರೂ ಇದರ ಚಿಂತಯೇ ಇಲ್ಲದಂತೆ ಎಸ್ಐ ಒಬ್ಬರು ಪೊಲೀಸ್ ಠಾಣೆ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದು ಈಗ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.ಜಿಲ್ಲೆಯ ಹೆಚ್.ಡಿ.ಕೋಟೆಯ ಪೊಲೀಸ್ ಠಾಣೆಯ ಎಸ್ಐ ಇಂದು ತಾವು ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಯ ಮುಂಭಾಗದಲ್ಲೇ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದು ಇಲ್ಲಿ ಯಾರು ಕೂಡ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಕರ್ತವ್ಯದ ಸಮಯದಲ್ಲೇ ಸಾರ್ವಜನಿಕರೊಂದಿಗೆ ಕೊರೊನಾದಂತಹ ಸಂದರ್ಭದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.ಇನ್ನು ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಹೇಳುವ ಪೊಲೀಸರೇ ಈ ರೀತಿ ನಡೆದುಕೊಂಡಿದ್ದು ಸರಿಯೇ ಎಂಬ ಚರ್ಚೆ ಆರಂಭವಾಗಿದೆ.